Breaking News

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಹೆಚ್ಚು ರ್ಯಾಂಕ್ ಗಳಿಸುವ ಉದ್ದೇಶವನ್ನು ಮಿಶನ್ ವಿದ್ಯಾಕಾಶಿ ಹೊಂದಿದೆ – ಡಿಸಿ ದಿವ್ಯ ಫ್ರಭು.

Spread the love

 

ಧಾರವಾಡ ಜಿಲ್ಲೆಯಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ಮಿಶನ್ ವಿದ್ಯಾಕಾಶಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಓದುಬರಹ ಸುಧಾರಣೆ, ಎಸ್‍ಎಸ್‍ಎಲ್‍ಸಿ ಅನುತ್ತಿರ್ಣ ಪ್ರಮಾಣ ಕಡಿಮೆ ಮಾಡುವುದು ಮತ್ತು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಹೆಚ್ಚು ರ್ಯಾಂಕ್ ಗಳಿಸುವ ಉದ್ದೇಶವನ್ನು ಮಿಶನ್ ವಿದ್ಯಾಕಾಶಿ ಹೊಂದಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ನಗರದಲ್ಲಿಂದು ಕೆ.ಇ.ಬೋರ್ಡ್ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಶಾಲಾ ಶಿಕ್ಷಣ ಇಲಾಖೆ ಸಂಯುಕ್ತವಾಗಿ ಮಿಶನ್ ವಿದ್ಯಾಕಾಶಿ ಯೋಜನೆಯಡಿ ವಿವಿಧ ತಾಲೂಕುಗಳ ಪ್ರತಿಭಾವಂತ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ನಮ್ಮ ಗುರಿ ನೂರರತ್ತ-ಪ್ರೇರಣಾ ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿದರು.

ಧಾರವಾಡ ಜಿಲ್ಲೆಯಿಂದ ಸುಮಾರು 29 ಸಾವಿರ ಮಕ್ಕಳು ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಎಲ್ಲ ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣ ಆಗುವಂತೆ ಅವರ ಕಲಿಕಾಗುಣಮಟ್ಟಕ್ಕೆ ಅನುಗುಣವಾಗಿ ಶಿಕ್ಷಕರಿಂದ ಪ್ರತ್ಯೇಕವಾಗಿ ಮತ್ತು ವಿಶೇಷವಾಗಿ ಓದು ಬರಹ ಕಲಿಸಲಾಗುತ್ತಿದೆ. ಜಿಲ್ಲೆಗೆ ಈ ಬಾರಿ ಹೆಚ್ಚು ರ್ಯಾಂಕ್ ತರಬೇಕು ಎಂಬ ಹಿನ್ನಲೆಯಲ್ಲಿ ಚಾಣಾಕ್ಷ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಣ ಇಲಾಖೆ ಮೂಲಕ ಪ್ರತಿ ತಾಲೂಕಿನಲ್ಲಿ ಗುರುತಿಸಿ, ಅವರಿಗೆ ಪೆÇ್ರೀತ್ಸಹ ನೀಡಲಾಗುತ್ತಿದೆ.

ಅದರಂತೆ ಪ್ರತಿ ತಾಲೂಕಿನಿಂದ ವಿಶೇಷವಾಗಿ 20 ವಿದ್ಯಾರ್ಥಿಗಳನ್ನು ಅವರ ಶೈಕ್ಷಣಿಕ ಸಾಧನೆ, ಪರೀಕ್ಷಾ ಗುಣಮಟ್ಟ ಗಮನಿಸಿ, ನಮ್ಮ ಗುರಿ ನೂರರತ್ತ ಪ್ರೇರಣಾ ಕಾರ್ಯಾಗಾರದಲ್ಲಿ ತರಬೇತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಜತೆಗೆ ರ್ಯಾಂಕ್ ಪಡೆಯುವ ವಿದ್ಯಾರ್ಥಿಗಳು ಶ್ರಮ ಪಟ್ಟು ಓದುವ, ನಿರಂತರ ಅಧ್ಯಯನ ಮೂಲಕ ಸಾಮಾನ್ಯರ ಗುಂಪಿನಿಂದ ಸಾಧಕರ ಗುಂಪಿಗೆ ಸೇರಬೇಕು. ಜೀವನದಲ್ಲಿನ ಎಲ್ಲ ಸಾಧನೆಗಳಿಗೆ ಶ್ರದ್ಧೆ ಮತ್ತು ಶಿಸ್ತುಬದ್ಧತೆ ಮುಖ್ಯವಾಗಿದೆ. ಗೆಲವು, ಸಾಧನೆಗಳಿಗೆ ಶಿಸ್ತು ಮೂಲ ಕಾರಣ. ವಿದ್ಯಾರ್ಥಿಗಳು ಓದಿನಲ್ಲಿ ಶಿಸ್ತು ರೂಢಿಸಿಕೊಳ್ಳಬೇಕು. ಸತತ ಅಧ್ಯಯನದಿಂದ ಸಾಧನೆ ಸಾಧ್ಯವಾಗುತ್ತದೆ. ನಮ್ಮ ಸ್ಪರ್ಧೆ ಇತರರೊಂದಿಗೆ ಮಾಡದೇ ನಮ್ಮೊಳಗೆ ನಾವೇ ಸ್ಪರ್ಧೆ ಮಾಡಿಕೊಳ್ಳಬೇಕು. ಅಂದಾಗ ಆರೋಗ್ಯಕರ ಸ್ಪರ್ಧೆ ಮೂಡುತ್ತದೆ ಎಂದು ಅವರು ತಿಳಿಸಿದರು.


Spread the love

About Laxminews 24x7

Check Also

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

Spread the love ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ