Breaking News

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the love

ಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! ಇಂಥದ್ದೊಂದು ವಿಲಕ್ಷಣ ಘಟನೆ ಬೆಂಗಳೂರಿನ (Bengaluru) ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಜಕಾರಣಿಗಳ ಜತೆ ಹಾಗೂ ಸಹಚಚರ ಒಟ್ಟಿಗೆ ಮಲಗುವಂತೆ ಒತ್ತಾಯಿಸುತ್ತಿದ್ದುದಲ್ಲದೆ, 6 ಬಾರಿ ತಲಾಖ್ (Talaq) ನೀಡಿದ ಮತ್ತು ಅಬಾರ್ಷನ್ ಮಾಡಿಸಿದ ಆರೋಪದಲ್ಲಿ ಪತಿಯ ವಿರುದ್ಧವೇ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಜತೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಲ್ಲಿ ಅತ್ತೆ-ಮಾವನ ವಿರುದ್ಧವೂ ದೂರು ದಾಖಲಿಸಿದ್ದಾರೆ. ಸಂತ್ರಸ್ತೆ ನೀಡಿದ ದೂರಿನ ಆಧಾರದಲ್ಲಿ ಸದ್ಯ ಬನಶಂಕರಿ ಠಾಣೆ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ

ರಾಜಕಾರಣಿಗಳ ಜೊತೆ ಮಲಗೆಂದು ಒತ್ತಾಯ

ಸಂತ್ರಸ್ತೆಯು 25-6-2021 ರಂದು ಆರೋಪಿ ಯೂನಸ್ ಪಾಷಾನನ್ನು ವಿವಾಹವಾಗಿದ್ದರು. ಇದಾದ ಸುಮಾರು 4 ತಿಂಗಳ ನಂತರ ಆರೋಪಿಗಳಾದ ಯೂನಸ್ ಪಾಷಾ, ಆತನ ತಂದೆ ಚಿಂದ್ ಪಾಷಾ, ತಾಯಿ ಪಹೀನ್ ತಾಜ್ ಸೇರಿಕೊಂಡು ಸಂತ್ರಸ್ತೆಗೆ ಹಿಂಸೆ ನೀಡಲು ಆರಂಭಿಸಿದ್ದಾರೆ. ಈ ಮಧ್ಯೆ, ಸಂತ್ರಸ್ತೆಯು ಗರ್ಭವತಿಯಾಗಿದ್ದು, ಯೂನಸ್ ಪಾಷಾ ಆಕೆಯ ಹೊಟ್ಟೆಯ ಮೇಲೆ ಒದ್ದು ಹಲ್ಲೆ ಮಾಡಿದ್ದ. 17-12-2021 ರಂದು ಸಂತ್ರಸ್ತೆಯನ್ನು ಹೆದರಿಸಿ ಮತ್ತು ಒತ್ತಾಯಪಡಿಸಿ ಗರ್ಭಪಾತ ಮಾಡಿಸಿದ್ದಾನೆ ಎಂದು ಎಫ್​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ.


Spread the love

About Laxminews 24x7

Check Also

ರಾಜ್ಯದ 368 ನ್ಯಾಯಾಧೀಶರ ವರ್ಗಾವಣೆ! ವಿನಯ್ ಕುಲಕರ್ಣಿ ದೋಷಿ ಆದೇಶಿಸಿದ ಜಡ್ಜ್ ಕೂಡ ಟ್ರಾನ್ಸ್​ಫರ್​

Spread the loveಬೆಂಗಳೂರು: ಆಡಳಿತಾತ್ಮಕ ಉದ್ದೇಶಗಳಿಗಾಗಿ ರಾಜ್ಯದ್ಯಂತ 368 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಎಂದು ಹೈಕೋರ್ಟ್​ ಗುರುವಾರ (ಏ.16) ಆದೇಶ ಹೊರಡಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ