Breaking News
Home / ಜಿಲ್ಲೆ / ಬೆಳಗಾವಿ / ಸ್ಕೂಟರ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಶಿಕ್ಷಕಿಯೊಬ್ಬರು ಮೃತಪಟ್ಟ ದಾರುಣ ಘಟನೆ ಬೆಳಗಾವಿಯ ಕೊಲ್ಲಾಪುರ ಸರ್ಕಲ್ ಬಳಿ ನಡೆಯಿತು.

ಸ್ಕೂಟರ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಶಿಕ್ಷಕಿಯೊಬ್ಬರು ಮೃತಪಟ್ಟ ದಾರುಣ ಘಟನೆ ಬೆಳಗಾವಿಯ ಕೊಲ್ಲಾಪುರ ಸರ್ಕಲ್ ಬಳಿ ನಡೆಯಿತು.

Spread the love

ಬೆಳಗಾವಿ: ಸ್ಕೂಟರ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಇಲ್ಲಿನ ಕೊಲ್ಲಾಪುರ ಸರ್ಕಲ್ ಸಮೀಪ ನಡೆದಿದೆ. ನಗರದ ಖಾಸಗಿ ಶಾಲೆಯೊಂದರ ಶಿಕ್ಷಕಿ ರೇಣುಕಾ ಭಾತಕಾಂಡೆ (30)‌ ಮೃತರು.

ಇವರು ಚನ್ನಮ್ಮ ವೃತ್ತದ ಕಡೆ ತಮ್ಮ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಶಿಕ್ಷಕಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ತಿಂಗಳ ಹಿಂದಷ್ಟೇ ಪತಿಯನ್ನು ಕಳೆದುಕೊಂಡಿದ್ದರು. ಈಗ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ. ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ