Breaking News

ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ ಎಂದು ಪ್ರಶ್ನೆ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.ಸಿದ್ದರಾಮಯ್ಯ

Spread the love

ಬೆಂಗಳೂರು: ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮುದಿ ಎತ್ತು ಎಂದು ಹೇಳಿದ್ದ ಬಿಜೆಪಿಯ ನಾಯಕರ ಹೇಳಿಕೆಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಟಿ.ಬಿ.ಜಯಚಂದ್ರ ಅವರಿಗೆ ವಯಸ್ಸಾಗಿದೆ ಅಂದ್ರೆ ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ ಎಂದು ಪ್ರಶ್ನೆ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ನಮ್ಮ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ. ಹಾಗಾದರೆ ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ?. ಚುನಾವಣೆಯನ್ನು ಸಾಧನೆ ಮತ್ತು ಸಿದ್ಧಾಂತದ ಮೂಲಕ ಎದುರಿಸಲಾಗದವರು ಮಾತ್ರ ಸೋಲಿನ ಭೀತಿಯಿಂದ ಈ ರೀತಿ ಚಾರಿತ್ರ್ಯಹರಣ, ಗೂಂಡಾಗಿರಿ, ಹಣ ಹಂಚುವುದು ಮೊದಲಾದ ಅಡ್ಡದಾರಿ ಹಿಡಿಯುವುದು ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಗುಡುಗಿದ್ದಾರೆ.

ಮಂಗಳವಾರ ಯಶವಂತಪುರ ಸಮೀಪ ಚುನಾವಣಾ ಪ್ರಚಾರ ಭಾಷಣ ಮಾಡುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಭಾಷಣಕ್ಕೆ ಅಡ್ಡಿಪಡಿಸಿದ್ದರಲ್ಲದೆ, ನಾನು ವಾಪಾಸು ತೆರಳುವಾಗ ವಾಹನ ಅಡ್ಡಗಟ್ಟಿ ಬೆದರಿಸುವ ಪ್ರಯತ್ನ ಮಾಡಿದ್ದರು. ಇದು ಬಿಜೆಪಿಯವರ ರಾಜಕಾರಣದ ಇನ್ನೊಂದು ಮುಖವನ್ನು ಅನಾವರಣಗೊಳಿಸಿದೆ ಎಂದು ಆರೋಪಿಸಿದ್ದಾರೆ.

ಆರ್.ಆರ್ ನಗರದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ್ದ ಮುನಿರತ್ನ ಅವರೆ ಅಲ್ಲಿನ ಕಾನೂನು ಬಾಹಿರ ಚಟುವಟಿಕೆಗಳಿಗೆ, ಗೂಂಡಾಗಿರಿಗೆ ಮೂಲ ಕಾರಣ. ಸೋಲಿನ ಭಯದಿಂದ ಜಿ.ಕೆ ವೆಂಕಟೇಶ್ ಅಂಥವರನ್ನು ಮುಂದೆ ಬಿಟ್ಟು ಮುನಿರತ್ನ ಅವರೆ ಗಲಭೆ ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯನವರು ಅನುಮಾನ ವ್ಯಕ್ತಪಡಿಸಿದ್ದಾರೆ


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ