Breaking News
Home / Uncategorized / ಕುಟುಂಬದಿಂದ ಹೊರಹಾಕುತ್ತೇವೆ ಎಂದ ದೇವೇಗೌಡರಿಗೆ ಪ್ರಜ್ವಲ್ ವಿದೇಶಕ್ಕೆ ಹೋಗುವುದು ಗೊತ್ತಿರಲಿಲ್ವ? ಸಿಎಂ

ಕುಟುಂಬದಿಂದ ಹೊರಹಾಕುತ್ತೇವೆ ಎಂದ ದೇವೇಗೌಡರಿಗೆ ಪ್ರಜ್ವಲ್ ವಿದೇಶಕ್ಕೆ ಹೋಗುವುದು ಗೊತ್ತಿರಲಿಲ್ವ? ಸಿಎಂ

Spread the love

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರಿಸಿಕೊಂಡಿದ್ದಾರೆ. ಈ ಕುರಿತಂತೆ ನಿನ್ನೆ ಎಚ್ ಡಿ ದೇವೇಗೌಡರು ಪ್ರಜ್ವಲ್ ಗೆ ಪತ್ರ ಬರೆದಿದ್ದು ಎಲ್ಲೇ ಇದ್ದರೂ ಬಂದು ಶರಣಾಗು ಎಂದು ತಿಳಿಸಿದ್ದರು.

ಇದೀಗ ಸಿಎಂ ಸಿದ್ದರಾಮಯ್ಯ ಇದಕ್ಕೆ ಪ್ರತಿಕ್ರಿಯೆ ಸಿದ್ದು ಪ್ರಜ್ವಲ್ ಅನ್ನು ಕುಟುಂಬದಿಂದ ಹೊರ ಹಾಕುತ್ತೇವೆ ಎಂದು ದೇವೇಗೌಡರಿಗೆ ವಿದೇಶಕ್ಕೆ ಹೋಗುವುದು ಗೊತ್ತಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿರುವ ಅವರು, ಮಾಜಿ ಮುಖ್ಯಮಂತ್ರಿ HD ಕುಮಾರಸ್ವಾಮಿ ಅವರ ಅಣ್ಣನ ಮಗ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ. ಅತ್ಯಾಚಾರದ ವೀಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ. ಅತ್ಯಾಚಾರದ ಸಂಗತಿಯನ್ನು ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ. ಅವರು ಈ ನೆಲದ ಕಾನೂನಿಗೆ ಗೌರವ ಕೊಡಬೇಕು. ಅಣ್ಣನ ಮಗ ಅಪರಾಧಿಯಲ್ಲ ಆರೋಪಿ ಅಷ್ಟೇ ಎಂದಿದ್ದಾರೆ, ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಂತೆ ನಾನೂ ಕೂಡ ಆರೋಪಿ ಎಂದೇ ಹೇಳಿದ್ದೇನೆ.

ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದತಿಗೆ ಮೋದಿಯವರಿಗೆ ಪತ್ರ ಬರೆದಿದ್ದು ಈವರೆಗೆ ಅವರಿಂದ ಪ್ರತಿಕ್ರಿಯೆ ಬಂದಿಲ್ಲ. ಎಲ್ಲರಿಗೂ ಪ್ರಧಾನಮಂತ್ರಿಗಳ ಕಚೇರಿಯಿಂದ ಕೂಡಲೇ ಉತ್ತರ ದೊರಕುತ್ತದೆ ಎಂದು ನಂಬಿರುವುದೇ ನಿಮ್ಮ ತಪ್ಪು. ನಾವು ಬರೆದಿರುವ ಅನೇಕ ಪತ್ರಗಳಿಗೆ ಅವರು ಉತ್ತರ ಕೊಟ್ಟಿಲ್ಲ.ಕುಟುಂಬದಿಂದ ಹೊರಹಾಕುತ್ತೇವೆ ಎಂದ ದೇವೇಗೌಡರಿಗೆ ಪ್ರಜ್ವಲ್ ವಿದೇಶಕ್ಕೆ ಹೋಗುವುದು ಗೊತ್ತಿರಲಿಲ್ವ? ಸಿಎಂ ಸಿದ್ದರಾಮಯ್ಯ

ಚುನಾಯಿತ ಸರ್ಕಾರದ ಮುಖ್ಯಮಂತ್ರಿ ಪ್ರಧಾನಿಗಳಿಗೆ ಪತ್ರ ಬರೆದಾಗ ಸ್ವಾಭಾವಿಕವಾಗಿ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಲು ಬರೆದ ಮೊದಲ ಪತ್ರಕ್ಕೆ ಉತ್ತರ ಕೊಟ್ಟಿಲ್ಲ. ಎರಡನೇ ಪತ್ರಕ್ಕೆ ಉತ್ತರ ಕೊಡುತ್ತಾರೋ ಇಲ್ಲವೋ ಕಾದು ನೋಡಬೇಕು ಎಂದಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದ ಎರಡನೇ ರಾಜಧಾನಿಯಾಗಲಿಬೆಳಗಾವಿ

Spread the love ಬೆಳಗಾವಿ: ನಗರದ ಎಸ್‌. ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ತಾಯಿ ಭುವನೇಶ್ವರಿ, ಚಾಲುಕ್ಯ ಚಕ್ರವರ್ತಿ ಇಮ್ಮಡಿ ಪುಲಕೇಶಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ