Breaking News
Home / ಜಿಲ್ಲೆ / ಚಿಕ್ಕ ಮಂಗಳೂರು / ಶಾಸಕನ ಅಮಾನವೀಯ ನಡೆಗೆ ಮೃತಪಟ್ಟ ವೈದ್ಯ: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ರೂ ನೆರವಿಗೆ ಬಾರದೇ ನಿರ್ಲಕ್ಷ್

ಶಾಸಕನ ಅಮಾನವೀಯ ನಡೆಗೆ ಮೃತಪಟ್ಟ ವೈದ್ಯ: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ರೂ ನೆರವಿಗೆ ಬಾರದೇ ನಿರ್ಲಕ್ಷ್

Spread the love

ಚಿಕ್ಕಮಗಳೂರು: ಅಪಘಾತದಲ್ಲಿ ವೈದ್ಯರೊಬ್ಬರು ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲೇ ನರಳಾಡುತ್ತಿದ್ದರೂ, ಸಮೀಪದಲ್ಲೇ ಇದ್ದ ಶಾಸಕರೊಬ್ಬರು ಸಹಾಯಕ್ಕೆ ಬಂದಿಲ್ಲ ಎಂದು ಹೇಳಲಾಗಿದೆ.

ಕರ್ತವ್ಯ ಮುಗಿಸಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ಕೋವಿಡ್ ವಾರಿಯರ್ ಡಾ. ರಮೇಶ್ ಕುಮಾರ್ ಅವರಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣಕ್ಕೆ ಆಸ್ಪತ್ರೆಗೆ ಸೇರಿಸಿದ್ದರೆ ಬದುಕುಳಿಯುವ ಸಾಧ್ಯತೆ ಇತ್ತು ಎನ್ನಲಾಗಿದೆ.

ಅಪಘಾತದ ನಂತರ ಸ್ಥಳಕ್ಕೆ ಬಂದಿದ್ದ ಶಾಸಕ ತಮ್ಮ ಕಾರಿನಲ್ಲೇ ಆಸ್ಪತ್ರೆ ಸಾಗಿಸಿದ್ದರೆ ವೈದ್ಯ ರಮೇಶ್ ಕುಮಾರ್ ಬದುಕುತ್ತಿದ್ದರು. ಆದರೆ, ಶಾಸಕ ಕಾರಿನಿಂದ ಇಳಿಯದೇ ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದಾಗಿ ತಡವಾಗಿ ಬಂದ ಆಂಬುಲೆನ್ಸ್ ನಲ್ಲಿ ರಮೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಅಪಘಾತದ ಸಂದರ್ಭದಲ್ಲಿ ಗಾಯಗೊಂಡಿದ್ದ ವೈದ್ಯನಿಗೆ ಸಹಾಯ ಮಾಡದೆ ಶಾಸಕ ಅಮಾನವೀಯತೆ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


Spread the love

About Laxminews 24x7

Check Also

ಸಾಮೂಹಿಕ ರಾಜೀನಾಮೆಗೆ ಮುಂದಾದ ಬಿಜೆಪಿ ಯುವ ಮೋರ್ಚಾ ಘಟಕ ಸದಸ್ಯರು

Spread the loveಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ಹತ್ಯೆಯಾಗಿದ್ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಪಕ್ಷದ ವಿರುದ್ಧವೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ