ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇಂದು (ಶುಕ್ರವಾರ) ಬೆಳಿಗ್ಗೆ ನಿಧನರಾಗಿದ್ದಾರೆ. ಲೇಖಕರಾಗಿ, ಪ್ರಾಧ್ಯಾಪಕರಾಗಿ, ರಂಗಭೂಮಿ ಕಲಾವಿದರಾಗಿ, ಚಿತ್ರ ನಟರಾಗಿ ಗೋವಿಂದ ರಾವ್ ಗುರುತಿಸಿಕೊಂಡಿದ್ದರು.
ಇವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಇನ್ನು ಹುಬ್ಬಳ್ಳಿಯ ಮುಕ್ತಿಧಾಮದಲ್ಲಿ ಬೆಳಗ್ಗೆ 8.30 ಸುಮಾರಿಗೆ ಅಂತ್ಯಕ್ರಿಯೆ ಮಾಡಲಾಗಿದೆ.
ಈ ಬಗ್ಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ”ಹಿರಿಯ ಲೇಖಕ, ಚಿಂತಕ, ನಟ ಪ್ರೊ.ಜಿ.ಕೆ.ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು.ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದಿದ್ದಾರೆ.