ಆದರೆ ಈವರೆಗೂ ಕಾಂಗ್ರೆಸ್ (Congress) ಯಾವುದೇ ಕ್ಷೇತ್ರಕ್ಕೂ ಟಿಕೆಟ್ ಘೋಷಣೆ ಮಾಡಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಸಂಡೂರಿನಲ್ಲಿ ತುಕಾರಾಂ ಕುಟುಂಬಕ್ಕೆ ಟಿಕೆಟ್ ಫೈನಲ್ ಮಾಡಿದ್ದೇವೆ ಎಂದು ಹೇಳಿದ್ದಾರೆ.
ತುಕಾರಾಂ ಪತ್ನಿಗೆ ಟಿಕೆಟ್
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಂಡೂರಿನಲ್ಲಿ ಸಂಸದ ತುಕಾರಾಂ ಕುಟುಂಬಕ್ಕೆ ಟಿಕೆಟ್ ಫೈನಲ್ ಮಾಡಿದ್ದೇವೆ, ಅವರ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ನೀಡುತ್ತೇನೆ. ಇನ್ನು ಚನ್ನಪಟ್ಟಣ ಶಿಗ್ಗಾವಿ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಆ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.
Laxmi News 24×7