Breaking News

ಯಶಸ್ವಿನಿ ಯೋಜನೆ ನೋಂದಣಿ: ಮಾರ್ಚ್‌ 31ರವರೆಗೆ ಅವಧಿ ವಿಸ್ತರಣೆ

Spread the love

ಬೆಂಗಳೂರು: ಯಶಸ್ವಿನಿ ಯೋಜನೆಯ ನೋಂದಣಿಗೆ ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ಮಾರ್ಚ್‌ 31ರವರೆಗೆ ವಿಸ್ತರಿಸಲಾಗಿದೆ.

2022-23ನೇ ಸಾಲಿನಿಂದ ಈ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ಮೂರನೇ ಬಾರಿ ನೋಂದಣಿಯ ಅವಧಿಯನ್ನು ವಿಸ್ತರಿಸಲಾಗಿದೆ.

 

ಹೊಸ ಸದಸ್ಯರ ನೋಂದಣಿಗೆ 2023ರ ಫೆ.28 ಕೊನೆಯ ದಿನವಾಗಿತ್ತು. ಈ ಯೋಜನೆ ಅಡಿಯಲ್ಲಿ 30 ಲಕ್ಷ ಸದಸ್ಯರನ್ನು ನೋಂದಾಯಿಸಲು ಗುರಿ ನಿಗದಿಪಡಿಸಲಾಗಿತ್ತು. ಇಲ್ಲಿಯವರೆಗೆ 34.52 ಲಕ್ಷ ಸದಸ್ಯರನ್ನು ನೋಂದಾಯಿಸಿಕೊಳ್ಳಲಾಗಿದೆ.

2023ರ ಜನವರಿ 1ರಿಂದ ನೆಟ್‌ವರ್ಕ್‌ ಆಸ್ಪತ್ರೆಗಳಲ್ಲಿ ಫಲಾನುಭವಿಗಳಿಗೆ ಚಿಕಿತ್ಸೆ ಆರಂಭಿಸಲಾಗಿದ್ದು, ಇದುವರೆಗೆ ಸುಮಾರು ಮೂರು ಸಾವಿರ ಫಲಾನುಭವಿಗಳು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಸಹಕಾರ ಇಲಾಖೆ ಜಂಟಿ ಕಾರ್ಯದರ್ಶಿ ಎ.ಸಿ. ದಿವಾಕರ್‌ ತಿಳಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ