ಬೆಂಗಳೂರು,ಫೆ.28- ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ ಒಂದು ವೇಳೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ವಿಧಾನಸಭೆಯಲ್ಲಿ ತಿಳಿಸಿದರು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಸೋಮವಾರ ಸಕಾಲಕ್ಕೆ ಆಗಮಿಸಿದ್ದ ಶಾಸಕರ ಹೆಸರುಗಳನ್ನು ಪ್ರಕಟಿಸಿದ ನಂತರ ಸಭಾಧ್ಯಕ್ಷರು ಅಧಿಕಾರಿಗಳಿಂದ ನನಗೆ ಮಾಹಿತಿ ಬಂದಿದೆ.

ರಾಷ್ಟ್ರಧ್ವಜವನ್ನು ಸದನದೊಳಗೆ ತಂದಿದ್ದಾರೆ ಎಂಬ ಮಾಹಿತಿ ಇದೆ. ನನ್ನ ಜವಾಬ್ದಾರಿ, ಕರ್ತವ್ಯವನ್ನು ನಿಭಾಯಿಸಬೇಕು. ಯಾರೂ ಕೂಡ ಅವಮಾನ ಮಾಡಬಾರದು. ಸದನದ ಹೊರಗೆ ನಡೆದಿರುವ ಘಟನೆ ಬಗ್ಗೆ ಚರ್ಚೆ ಮಾಡಲು ಅಡ್ಡಿಯಿಲ್ಲ. ಅದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
Laxmi News 24×7