Breaking News

ಲೋಕಾಯುಕ್ತ SIT ಕೆಲಸಕ್ಕೆ ಅಡ್ಡಿಪಡಿಸಿದರೆ ಪೊಲೀಸರಿಂದ ಕ್ರಮ: ಜಿ. ಪರಮೇಶ್ವರ

Spread the love

ಬೆಂಗಳೂರು: ‘ಲೋಕಾಯುಕ್ತ ವಿಶೇಷ ತನಿಖಾ ದಳದ (ಎಸ್‌ಐಟಿ) ಕೆಲಸಕ್ಕೆ ಅಡ್ಡಿಪಡಿಸಿದರೆ ಅವರದ್ದೇ ಆದ ಕೆಲವು ಕ್ರಮಗಳನ್ನು ಪೊಲೀಸ್‌ನವರು ತೆಗೆದುಕೊಳುತ್ತಾರೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಎಚ್.ಡಿ. ಕುಮಾರಸ್ವಾಮಿ ಮತ್ತು ಎಡಿಜಿಪಿ ಚಂದ್ರಶೇಖರ್ ಜಟಾಪಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಚಂದ್ರಶೇಖರ್ ನೇತೃತ್ವದ ಎಸ್‌ಐಟಿಯನ್ನು ಕಾನೂನು ಪ್ರಕಾರವೇ ರಚಿಸಲಾಗಿದೆ.

ಅವರು ಅವರ ಕೆಲಸ ಮಾಡ್ತಾರೆ. ಕೆಲಸಕ್ಕೆ ಅಡ್ಡಿಪಡಿಸಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ’ ಎಂದು ಎಚ್ಚರಿಕೆ ನೀಡಿದರು.

‘ಚಂದ್ರಶೇಖರ್ ಅವರು ತಮ್ಮ ಪತ್ರದಲ್ಲಿ ಬರ್ನಾರ್ಡ್ ಷಾ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ. ಅವರು ಅದನ್ನು ಕುಮಾರಸ್ವಾಮಿಯವರನ್ನು ಉದ್ದೇಶಿಸಿ ಹೇಳಿಲ್ಲ. ನನಗೇ ಹೇಳಿರುವುದು ಎಂದು ಕುಮಾರಸ್ವಾಮಿ ಯಾಕೆ ಭಾವಿಸಬೇಕು?’ ಎಂದರು.


Spread the love

About Laxminews 24x7

Check Also

ಹೃದಯಾಘಾತದಿಂದ ಸಾವನ್ನಪ್ಪಿದ ಡಾ.ಸಂದೀಪ್ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ

Spread the loveಶಿವಮೊಗ್ಗ/ತುಮಕೂರು: ಕಳೆದ ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ 19 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಈಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ