Breaking News

ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷನ ಕೊಲೆ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

Spread the love

ಗಂಗಾವತಿ(ಕೊಪ್ಪಳ): ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕೆ.ವೆಂಕಟೇಶ ಅವರ ಕೊಲೆ ಆರೋಪಿಗಳನ್ನು ಇಂದು ಪೊಲೀಸರು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಭೀಮ್ ಅಲಿಯಾಸ್ ಭರತ್, ಸಲೀಂ, ವಿಜಯ್ ಹಾಗೂ ಧನರಾಜ್ ಪ್ರಕರಣದ ಬಂಧಿತ ಆರೋಪಿಗಳು.

ಇದಕ್ಕೂ ಮುನ್ನ ಕೃತ್ಯ ನಡೆದ ರಾಣಾಪ್ರತಾಪ್ ಸಿಂಗ್ ವೃತ್ತ ಸಮೀಪದ ರಿಲಯನ್ಸ್ ಪಾಯಿಂಟ್‌ನ ಲೀಲಾವತಿ ಆಸ್ಪತ್ರೆಯ ಬಳಿ ಆರೋಪಿಗಳನ್ನು ಕರೆದೊಯ್ದ ಪೊಲೀಸರು ಸ್ಥಳ ಮಹಜರು ಮಾಡಿದರು.

ವಿಚಾರಣೆ ಬಾಕಿ ಇದ್ದಲ್ಲಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಬೇಕು. ವಿಚಾರಣೆ ಮುಗಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕು. ದೋಷಾರೋಪ ಪಟ್ಟಿ ಸಲ್ಲಿಕೆಯಾಗುವವರೆಗೂ ಪ್ರತಿ ಎರಡು ವಾರಕ್ಕೊಮ್ಮೆ ನ್ಯಾಯಾಲಯದೆದುರು ಹಾಜರುಪಡಿಸಬೇಕು. ಈ ಮಧ್ಯೆ ಹೆಚ್ಚುವರಿ ವಿಚಾರಣೆ, ಕೃತ್ಯದಲ್ಲಿ ಭಾಗಿಯಾಗದ ಇತರ ಆರೋಪಿಗಳ ಸೆರೆಗೆ ಈ ಆರೋಪಿಗಳ ನೆರವು ಬೇಕಾದಲ್ಲಿ ವಿಚಾರಣಾಧಿಕಾರಿಯಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ಬಳಿಕ ಆರೋಪಿಗಳನ್ನು ಕೊಪ್ಪಳದ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಘಟನೆಯ ಹಿನ್ನೆಲೆ: ಕೆ.ವೆಂಕಟೇಶ ಅವರು ತಡರಾತ್ರಿ ಊಟ ಮುಗಿಸಿ ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಕಾರಿನಲ್ಲಿ ಹಿಂಬಾಲಿಸಿದ ಐವರು ಯುವಕರ ಗುಂಪು, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ಅವರನ್ನು ಬೀಳಿಸಿದ್ದರು. ಕೆಳಕ್ಕೆ ಬಿದ್ದ ವೆಂಕಟೇಶನ ಮೇಲೆ ಮಾರಕಾಯುಧಗಳಿಂದ ಮನಬಂದಂತೆ ದಾಳಿ ನಡೆಸಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವೆಂಕಟೇಶನನ್ನು ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಮಧ್ಯರಾತ್ರಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದರು.

ಚಡಚಣ ಬ್ಯಾಂಕ್ ದರೋಡೆ ಕೇಸ್: ಕಳ್ಳರು ಚಾಪೆ ಕೆಳಗೆ ನುಗ್ಗಿದರೆ ಪೊಲೀಸರು ರಂಗೋಲಿ ಕೆಳಗೆ ನುಗ್ಗುವ ಮೂಲಕ ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ್ದ ಎಸ್​ಬಿಐ ಬ್ಯಾಂಕ್ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಭರ್ಜರಿ ಕಾರ್ಯಾಚರಣೆ ನಡೆಸಿ ಕಳ್ಳರನ್ನು ಹೆಡೆಮುರಿ ಕಟ್ಟುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸೆ.16ರಂದು ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದ್ದ ಎಸ್​ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರರು ಬಳಸಿದ್ದ ಒಂದು ಕಾರು ಒಂದು ಬೈಕ್ ಹಾಗೂ ಒಟ್ಟು 9.01 ಕೆಜಿ ಚಿನ್ನಾಭರಣ ಹಾಗೂ 86,31,220 ರೂ. ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ದರೋಡೆ ಪ್ರಕರಣಕ್ಕೆ ಬಂದೂಕು ಪೂರೈಸಿದ್ದ ಹಾಗೂ ಕೃತ್ಯಕ್ಕೆ ಸಹಕರಿಸಿದ್ದ ಬಿಹಾರ ಮೂಲದ ರಾಕೇಶ್​ ಕುಮಾರ್​ ಸಹಾನಿ, ರಾಜಕುಮಾರ್​ ಪಾಸ್ವಾನ ಹಾಗೂ ರಕ್ಷಕ್​ ಕುಮಾರ್​ ಮ್ಯಾತೋ ಎಂಬುವರನ್ನು ಹೆಡೆಮುರಿ ಕಟ್ಟುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ