Breaking News

ಮನೆಗೆ ನುಗ್ಗಿ ಆತಂಕ ಸೃಷ್ಟಿಸಿದ ಚಿರತೆ – ಸತತ 6 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Spread the love

ತುಮಕೂರು: ಮೇಕೆ ಹಿಡಿದುಕೊಂಡು ಮನೆಗೆ ನುಗ್ಗಿ ಆತಂಕ ಸೃಷ್ಟಿಸಿದ ಚಿರತೆಯನ್ನು  ಅರಣ್ಯ ಇಲಾಖೆ ಅಧಿಕಾರಿಗಳು 6 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ ಹಿಡಿದ ಘಟನೆ ಕುಣಿಗಲ್  ತಾಲೂಕಿನ ಹುಲಿಯೂರುದುರ್ಗ ಬಳಿಯ ಬಂದಿಗೌಡನಪಾಳ್ಯ ಗ್ರಾಮದಲ್ಲಿ ನಡೆದಿದೆ.

ಬಂದಿಗೌಡನಪಾಳ್ಯ ಗ್ರಾಮದ ಚಿಕ್ಕ ಮರಿಯಪ್ಪ ಎಂಬವರ ಮನೆಗೆ ಸೋಮವಾರ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಚಿರತೆ ನುಗ್ಗಿದೆ. ಕಳೆದ ಒಂದು ತಿಂಗಳಿಂದ ಗ್ರಾಮದ ಸುತ್ತಮುತ್ತ ಚಿರತೆ ಕಾಣಿಸಿಕೊಳ್ಳುತ್ತಿದ್ದು, ರಾತ್ರಿ ಆಹಾರ ಹುಡುಕಿಕೊಂಡು ಗ್ರಾಮದತ್ತ ಬಂದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಟಿವಿ ನೋಡುತ್ತಿದ್ದಾಗ ನುಗ್ಗಿದ ಚಿರತೆ:
ಘಟನೆ ವೇಳೆ ಮನೆಯಲ್ಲಿ ನರಸಮ್ಮ ಎಂಬವರು ಟಿವಿ ನೋಡುತ್ತಾ ಕುಳಿತಿದ್ದರು. ಈ ವೇಳೆ ಏಕಾಏಕಿ ಮೇಕೆ ಹಿಡಿದುಕೊಂಡು ಮನೆಗೆ ನುಗ್ಗಿದ ಚಿರತೆ ಆತಂಕ ಸೃಷ್ಟಿಸಿದೆ. ಗಾಬರಿಗೊಂಡ ನರಸಮ್ಮ ಕೂಡಲೇ ಮನೆಯಿಂದ ಹೊರಗೆ ಓಡಿ ಬಂದು ಬಾಗಿಲು ಹಾಕಿದ್ದಾರೆ. ಬಳಿಕ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ, ಬನ್ನೇರುಘಟ್ಟದಿಂದ ಬಂದಿದ್ದ ಅರವಳಿಕೆ ತಜ್ಞ ಕಿರಣ್ ಅವರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದರು. ಮನೆಯಲ್ಲಿದ್ದ ಮಂಚದ ಕೆಳಗೆ ಅಡಗಿ ಕುಳಿತಿದ್ದ ಚಿರತೆಗೆ ಅರವಳಿಕೆ ಮದ್ದು ನೀಡಿ ಸುಮಾರು 6 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಚಿರತೆ ಸೆರೆಯಾಗುತ್ತಿದ್ದಂತೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆಯಾದ ನವವಿವಾಹಿತೆ ಆತ್ಮಹತ್ಯೆ – ವರದಕ್ಷಿಣೆ ಕಿರುಕುಳ ಆರೋಪ

Spread the loveಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಮದುವೆಯಾಗಿ ವರ್ಷ ಕಳೆಯುವ ಮುನ್ನವೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ