Breaking News

ಚನ್ನಪಟ್ಟಣದ ಸುಳ್ಳೇರಿಯಲ್ಲಿ ಚಿರತೆ ಪ್ರತ್ಯಕ್ಷ – ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಗ್ರಾಮಸ್ಥರಲ್ಲಿ ಆತಂಕ

Spread the love

ರಾಮನಗರ: ಚನ್ನಪಟ್ಟಣ  ತಾಲೂಕಿನಲ್ಲಿ ಚಿರತೆ  ಹಾವಳಿ ಮುಂದುವರಿದಿದೆ. ತಾಲೂಕಿನ ಸುಳ್ಳೇರಿ ಗ್ರಾಮದ ಜನವಸತಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.

ಗ್ರಾಮದ ನಿವಾಸಿ ಮುತ್ತುರಾಜು ಎಂಬವರ ಮನೆಯ ಬಳಿ ತಡರಾತ್ರಿ ಚಿರತೆಯೊಂದು ಓಡಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜನವಸತಿ ಪ್ರದೇಶದಲ್ಲೇ ಚಿರತೆ ಪ್ರತ್ಯಕ್ಷಗೊಂಡಿರುವುದರಿಂದ ಗ್ರಾಮಸ್ಥರು ರಾತ್ರಿ ವೇಳೆ ಹೊರಬರಲು ಹೆದರುವಂತಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಳ್ಳೇರಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆ ಭೀತಿ ಹೆಚ್ಚಾಗಿದ್ದು, ಅನಾಹುತ ಸಂಭವಿಸುವ ಮುನ್ನವೇ ಅರಣ್ಯ ಇಲಾಖೆ ಕೂಡಲೇ ಬೋನು ಅಳವಡಿಸಿ ಚಿರತೆ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಪುತ್ರಿಯೊಂದಿಗೆ ಸಲುಗೆ ಕೆಲಸಗಾರನ ಹತ್ಯೆಗೈದ ತಂದೆ

Spread the loveಬೆಂಗಳೂರು: ಮನೆಯಲ್ಲಿ ಪುತ್ರಿಯೊಂದಿಗೆ ಸಿಕ್ಕಿಬಿದ್ದ ಕೇರಳ ಮೂಲದ ಕೆಲಸಗಾರನನ್ನು ತಂದೆಯೇ ಕ್ರಿಕೆಟ್ ಬ್ಯಾಟ್ ಹಾಗೂ ಪೈಪ್‌ನಿಂದ ಹಲ್ಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ