Breaking News

ಕಾಂಗ್ರೆಸ್ ಶಾಸಕನಿಂದ ಕಮೀಷನ್ ಆರೋಪ ವಿಚಾರ ತನಿಖೆ ಆಗಲಿ: ಯು‌.ಟಿ. ಖಾದರ್

Spread the love

ಬೆಂಗಳೂರು: ಸಚಿವರ ಹೆಸರಿನಲ್ಲಿ ಕಮೀಷನ್ ಕೇಳಿದ ಪ್ರಕರಣ ತನಿಖೆ ಆಗಲಿ ಎಂದು ಸಚಿವ ಯುಟಿ. ಖಾದರ್ ತಿಳಿಸಿದ್ದಾರೆ.

ಕಾಂಗ್ರೆಸ್ ಶಾಸಕ ಅಶೋಕ್ ರೈ  ಅವರಿಂದ 7% ಕಮೀಷನ್ ಆರೋಪ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಚಿವರ ಹೆಸರು ಹೇಳಿ ಕಮೀಷನ್ ತಗೋತಿದ್ದಾರೆ ಅಂತ ಆರೋಪ ಮಾಡಿದ್ದಾರೆ. ಗ್ರಾಮೀಣಾಭಿವೃದ್ದಿ ಸಚಿವರು ತಕ್ಷಣ ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಗೆ ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವರಿಗೂ ನಾನು ತನಿಖೆ ಮಾಡೋಕೆ ಮನವಿ ಮಾಡಿದ್ದೆ. ಸಿಎಂ ಅವರಿಗೂ ಪತ್ರ ಬರೆದು ಮನವಿ ಮಾಡಿದ್ದೇನೆ. ಸತ್ಯಾಂಶ ಹೊರಗೆ ಬರಲಿ ಎಂದಿದ್ದಾರೆ. 

ಯಾರು ಹಣ ಕೇಳಿದ್ರು ಗೊತ್ತಿಲ್ಲ. ತನಿಖೆ ಆಗಲಿ ಸತ್ಯಾಂಶ ಹೊರಗೆ ಬರಲಿ. ಯಾವುದೇ ಪಕ್ಷದವರಾದರೂ ಕ್ರಮ ಆಗಲಿ. ಇದರ ಬಗ್ಗೆ ನಾನು ಹೆಚ್ಚು ಮಾತಾಡಲ್ಲ. ತನಿಖೆ ಆಗಲಿ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಕಲಬುರಗಿಯಲ್ಲಿ ಭೀಕರ ಅಪಘಾತ – ತಾಯಿಯೊಂದಿಗೆ 3 ತಿಂಗಳ ಮಗು ಸ್ಥಳದಲ್ಲೇ ಸಾವು

Spread the loveಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಹೊರವಲಯದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ  ತಾಯಿಯೊಂದಿಗೆ ಮೂರು ತಿಂಗಳ ಮಗು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ