Breaking News

ಕಲಾ ಮಹಾವಿದ್ಯಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Spread the love

ಬಾಗಲಕೋಟೆ: ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಡಾ. ಎಸ್. ಆರ್. ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಸ್. ಆರ್. ಮೂಗನೂರಮಠ ಅವರು ಡಾ. ಎಸ್. ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಪಣೆ ಮಾಡಿದರು ಇದೇ ವೇಳೆ ಮಾತನಾಡಿ . ಎಸ್. ಆರ್. ರಂಗನಾಥನ್ ಅವರು ಗ್ರಂಥಾಲಯ ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಅವರ ಸೇವೆ ಹಾಗೂ ವಿಚಾರಧಾರೆಗಳನ್ನು ಸ್ಮರಿಸುವುದು ಗ್ರಂಥಪಾಲಕರ ದಿನಾಚರಣೆಯ ಉದ್ದೇಶವಾಗಿದೆ. ಗ್ರಂಥಾಲಯವು ವಿದ್ಯಾರ್ಥಿಗಳ ಜ್ಞಾನಾರ್ಜನೆಯ ಪ್ರಮುಖ ಕೇಂದ್ರವಾಗಿದ್ದು ಪುಸ್ತಕಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ದಾರಿ ತೋರಿಸುವ ಜ್ಞಾನ ಭಂಡಾರವಾಗಿವೆ. ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಜೊತೆಗೆ ವಿವಿಧ ವಿಷಯಗಳ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.

ಜನ್ಮದಿನದ ಅಂಗವಾಗಿ ಪುಸ್ತಕ ಕೊಡುಗೆ: ಬಸವೇಶ್ವರ ಕಲಾ ಮಹಾವಿದ್ಯಾಲಯದ ಬೋಧಕ ಸಿಬ್ಬಂದಿಗಳು ಜನ್ಮದಿನವನ್ನು ಗ್ರಂಥಾಲಯಕ್ಕೆ ಸ್ಪರ್ಧಾತ್ಮಕ ಪುಸ್ತಕಗಳನ್ನು, ನಿಯತಕಾಲಿಕೆಗಳನ್ನು ಕೊಡುಗೆಯಾಗಿ ನೀಡುವುದರ ಮೂಲಕ ವಿಶಿಷ್ಟವಾಗಿ ಆಚರಣೆ ಮಾಡಿಕೊಳ್ಳುತ್ತಿದ್ದು ಎಲ್ಲ ಪುಸ್ತಕಗಳನ್ನು ಪ್ರದರ್ಶ ಮಾಡಲಾಯಿತು. ಕಳೆದ ನಾಲ್ಕು ವರ್ಷಗಳಲ್ಲಿ ಎಪ್ಪತ್ತು ಸಾವಿರ ರೂ. ಮೌಲ್ಯದ 146 ಪುಸ್ತಕಗಳು ಕೊಡುಗೆಯಾಗಿ ಬಂದಿದ್ದು ಬೋಧಕ ಸಿಬ್ಬಂದಿಗಳ ಪುಸ್ತಕ ಪ್ರೇಮವನ್ನು ಎತ್ತಿ ತೋರಿಸುತ್ತಿವೆ.

ಕಾರ್ಯಕ್ರಮದಲ್ಲಿ ಗ್ರಂಥ ಪಾಲಕ ಸಂತೋಷ ಗೊರವರ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಸ್ಟ್ರೈಕ್‌ – ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸಂಚಾರ ಸ್ಥಗಿತ?

Spread the loveಬೆಂಗಳೂರು: ಕತ್ರಿಗುಪ್ಪೆಯ ಕಾಮಾಕ್ಯ ಎಲೆಕ್ಟ್ರಿಕಲ್ ಡಿಪೋ 13ರಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಪ್ರತಿಭಟನೆ ನಡೆಸಿದ್ದಾರೆ. ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ