Breaking News

ಸಿಡಿಲು ಬಡಿದು ದೇವಾಲಯದ ಮಹಾದ್ವಾರದ ಗೋಪುರದಲ್ಲಿ ಬಿರುಕು

Spread the love

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ವಂದಲಿ ಗ್ರಾಮದಲ್ಲಿ ದೇವಸ್ಥಾನದ ನಿರ್ಮಾಣ ಹಂತದ ಮಹಾದ್ವಾರದ ಗೋಪುರಕ್ಕೆ ಸಿಡಿಲು ಬಡಿದ ಪರಿಣಾಮ ಬಿರುಕು ಬಿಟ್ಟಿದೆ.

ಗ್ರಾಮದ ಐತಿಹಾಸಿಕ ಬಲಭೀಮ ಆಂಜನೇಯ ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದಿದೆ. ಸಿಡಿಲು ಬಡಿದ ಪರಿಣಾಮ ನಿರ್ಮಾಣ ಹಂತದ ಗೋಪುರದ ಹಲವು ಭಾಗಗಳಿಗೆ ಹಾನಿಯಾಗಿದೆ. ಗ್ರಾಮಸ್ಥರು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ್ದ ಗೋಪುರ ಅಂತಿಮ ಹಂತದಲ್ಲಿತ್ತು.

ಘಟನೆಯಿಂದ ಮಹಾಗೋಪುರದ ಮೇಲೆ ಹಾರಿಸಲಾಗಿದ್ದ ಭಗವಾಧ್ವಜಗಳು ಸುಟ್ಟು ಕರಕಲಾಗಿವೆ. ಅಲಂಕಾರಿಕ ಗೊಂಬೆಗಳ ದೇಹದ ಭಾಗಗಳು ಮುರಿದುಬಿದ್ದು, ಗೋಪುರದಲ್ಲಿ ಭಾರಿ ಬಿರುಕುಗಳು ಉಂಟಾಗಿವೆ. ಮಹಾಗೋಪುರಕ್ಕೆ ಸಿಡಿಲು ಬಡಿದ ಹಿನ್ನೆಲೆ ಭಕ್ತರಲ್ಲಿ ಆತಂಕ ಮೂಡಿದೆ.


Spread the love

About Laxminews 24x7

Check Also

ಪಶ್ಚಿಮ ಘಟ್ಟಗಳ ರಕ್ಷಣೆ – ರಾಜ್ಯ ಸರ್ಕಾರ ಸಮಿತಿ ರಚಿಸಲಿ: ಬಿ.ಕೆ.ಹರಿಪ್ರಸಾದ್

Spread the loveಬೆಂಗಳೂರು: ಪಶ್ಚಿಮಘಟ್ಟದ ಸಂಪೂರ್ಣ ಪ್ರದೇಶವನ್ನು ಒಂದೇ ನಿಯಮದಡಿ ತರುವ ಬದಲು, ದಟ್ಟ ಅರಣ್ಯ ಪ್ರದೇಶಗಳಿಗೆ ಮಾತ್ರ ಕಠಿಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ