ಬಸವೇಶ್ವರ ಜಯಂತಿ ನಿಮಿತ್ಯ ಲಿಂಗಾಯತ ಮುಖಂಡರು ಸಭೆ

Spread the love

ಬೆಳಗಾವಿ: ಜಗಜ್ಯೋತಿ ಬಸವೇಶ್ವರ ಜಯಂತಿ ನಿಮಿತ್ಯ ಬೆಳಗಾವಿ ಜಿಲ್ಲೆಯ ಪ್ರವಾಸಿ ಮಂದಿರದಲ್ಲಿ ಇಂದು ಸರ್ವಪಕ್ಷಗಳ ಲಿಂಗಾಯತ ಮುಖಂಡರು ಸಭೆ ನಡೆಸಿದರು.

ಈ ಸಭೆಯಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ, ರಾಜ್ಯ ಸಭೆ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ್ ಹುಕ್ಕೇರಿ, ಎಂ.ಎಲ್.ಸಿ ಚನ್ನರಾಜ್ ಹಟ್ಟಿಹೊಳಿ, ಸಂಸದ ಜಗದೀಶ್ ಶೆಟ್ಟರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, ಈ ಬಾರಿ ವೀರಶೈವ ಲಿಂಗಾಯಿತ ಸಮಾಜದ ವತಿಯಿಂದ ಅದ್ದೂರಿಯಾಗಿ ಏಪ್ರೀಲ್ 26 ರಂದು ಜಿಲ್ಲಾಮಟ್ಟದ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಿಸಲಾಗುತ್ತಿದೆ.

ಇಂದು ಈ ಬಗ್ಗೆ ಬೆಳಗಾವಿಯ ಸರ್ಕೀಟ್ ಹೌಸಿನಲ್ಲಿ ಬೆಳಗಾವಿ ಎಲ್ಲ ವೀರಶೈವ ಲಿಂಗಾಯಿತ ಸಮಾಜದ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಅದ್ಧೂರಿ ಬಸವೇಶ್ವರ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು.

ಬಸವಣ್ಣನವರ 893ನೇ ಜಯಂತ್ಯೋತ್ಸವವನ್ನು ಈ ಬಾರಿ ಆಚರಣೆ ಮಾಡಲಾಗುತ್ತಿದೆ. ಜಯಂತಿಯನ್ನು ಜಿಲ್ಲಾಮಟ್ಟದಲ್ಲಿ ಆಚರಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದರು.

ಏಪ್ರಿಲ್ 20 ರಂದು ಬಸವ ಜಯಂತಿ ಆಚರಣೆ ನಡೆಯಲಿದ್ದು, ಏಪ್ರಿಲ್ 19 ರಂದು ಜಾಗೃತಿ ರ್ಯಾಲಿ ನಡೆಸಲಾಗುವುದು. ಏಪ್ರಿಲ್ 26 ರಂದು ಜಿಲ್ಲಾಮಟ್ಟದ ಶ್ರೀ ಬಸವೇಶ್ವರ ಜಯಂತಿಯ ಕಾರ್ಯಕ್ರಮ ಆಯೋಜಿಸುವ ತಿರ್ಮಾನವನ್ನು ಸಭೆಯಲ್ಲಿ ಕೈಗೊಳ್ಳಲಾಗಿದ್ದು, ಸುಮಾರು 50 ಸಾವಿರಕ್ಕೂ ಹೆಚ್ಚು ವೀರಶೈವ ಲಿಂಗಾಯಿತ ಸಮಾಜ ಬಾಂಧವರು ಭಾಗಿಯಾಗುವ ನಿರೀಕ್ಷೆಯಿದ್ದು ಬಸವಣ್ಣನವರ ವಿಚಾರಧಾರೆಗಳನ್ನು ಅನುಸರಿಸುವ ಎಲ್ಲರೂ ಆಗಮಿಸಬೇಕೆಂದು ಕರೆ ನೀಡಿದರು.

ಬಳಿಕ ಮಾತನಾಡಿದ ಮಾಜಿ ರಾಜ್ಯಸಭಾ ಸದಸ್ಯ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರು ಬಸವಣ್ಣನವರ ಜಯಂತಿಯ ನಿಮಿತ್ಯ ಬೃಹತ್ ಮೆರವಣಿಗೆಯ ಮೂಲಕ ಬಸವಣ್ಣನವರ ಸಂದೇಶಗಳನ್ನು ಸಾರಲಾಗುವುದು.

ಪಾಶ್ಚಿಮಾತ್ಯ ಸಂಸ್ಕೃತಿಗಳನ್ನು ಅನುಸರಿಸದೇ, ಕೇವಲ ಸಾಂಪ್ರದಾಯಿಕ ಪದ್ದತಿಯಿಂದ ಏಪ್ರಿಲ್ 26 ರಂದು ಸಂಜೆ 4 ಗಂಟೆಗೆ ಈ ಮೆರವಣಿಗೆ ನಡೆಯಲಿದೆ. ಬಹುಜನರು ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ