Breaking News

ಹೈದ್ರಾಬಾದ್ ಡ್ರಗ್ಸ್ ಕೇಸ್‌ಗೂ ಬೆಂಗಳೂರಿಗೂ ಲಿಂಕ್ – ನಗರದ 2 ಕಡೆ ಇಡಿ ದಾಳಿ

Spread the love

ಬೆಂಗಳೂರು: ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತು ಮಾರಾಟ ಕೇಸ್‌ಗೆ ಸಂಬಂಧಿಸಿದಂತೆ ನಗರದ  ಎರಡು ಕಡೆ ಇಡಿ ಅಧಿಕಾರಿಗಳು (ಜಾರಿ ನಿದೇಶನಾಲಯ)  ದಾಳಿ ನಡೆಸಿದ್ದಾರೆ.

ಹೈದ್ರಾಬಾದ್ ಎನ್‌ಡಿಪಿಎಸ್ ಕೇಸ್‌ನಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಹೈದ್ರಾಬಾದ್‌ನಲ್ಲಿ 7 ಕಡೆ ದಾಳಿ ನಡೆಸಲಾಗಿದೆ. ಇತ್ತೀಚೆಗೆ ಹೈದ್ರಾಬಾದ್ ಪೊಲೀಸರು ಈ ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದರು. 

ಇತ್ತೀಚೆಗೆ ಥೈಲ್ಯಾಂಡ್‌ನಿಂದ ಹೈದರಾಬಾದ್ ವಿಮಾನ ನಿಲ್ದಾಣದ ಮೂಲಕ ವ್ಯಾಕ್ಯೂಮ್-ಸೀಲ್ಡ್ ಪ್ಯಾಕೇಜ್‌ಗಳಲ್ಲಿ ಭಾರತಕ್ಕೆ ಅಕ್ರಮವಾಗಿ 1,500 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿತ್ತು. ಈ ಸಂಬಂಧ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.

ಈ ಮಾದಕವಸ್ತು ಜಾಲದ ಮೂಲಕ ಗಳಿಸಲಾದ ಕೋಟ್ಯಂತರ ರೂ. ಅಕ್ರಮ ಹಣದ ವರ್ಗಾವಣೆಯ ಲಿಂಕ್‌ಗಳನ್ನು ಪತ್ತೆಹಚ್ಚಲು ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಮದ್ವೆಗೆ ನಿರಾಕರಿಸಿದ್ದಕ್ಕೆ ಬೈಕ್ ತಡೆದಿದ್ದ ಪ್ರೇಯಸಿ – ಹ್ಯಾಂಡಲ್‌ಗೆ ಜೋತುಬೀಳಿಸಿಕೊಂಡೇ ರಸ್ತೆಯಲ್ಲಿ ಎಳೆದೊಯ್ದ ಪ್ರಿಯಕರ

Spread the loveಪಾಟ್ನಾ: ಮದುವೆಗೆ ನಿರಾಕರಿಸಿದ್ದಕ್ಕೆ ಬೈಕ್ ತಡೆದು ನಿಂತಿದ್ದ ಪ್ರೇಯಸಿಯನ್ನು ಹ್ಯಾಂಡಲ್‌ಗೆ ಜೋತುಬೀಳಿಸಿಕೊಂಡೇ ಪ್ರಿಯಕರ ರಸ್ತೆಯಲ್ಲೇ ಎಳೆದಾಡಿದ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ