Breaking News

ಕಳ್ಳಭಟ್ಟಿ ತಯಾರಿಕಾ ಅಡ್ಡೆ ಮೇಲೆ ದಾಳಿ, ಕಚ್ಚಾ ಸಾಮಗ್ರಿ ನಾಶ ಪಡಿಸಿದ ಪೊಲೀಸರು

Spread the love

ತಾಳಿಕೋಟೆ: ತಾಲ್ಲೂಕಿನ ಗಡಿ ಸೋಮನಾಳ ಗ್ರಾಮದ ತಾಂಡಾಕ್ಕೆ ಹೊಂದಿಕೊಂಡಿರುವ ಜಮೀನೊಂದರಲ್ಲಿ ಕಳ್ಳಬಟ್ಟಿ ತಯಾರಿಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪಿ.ಎಸ್ ಐ ವಸಂತ ಬಂಡಗಾರ ಅವರ ನೇತೃತ್ವದಲ್ಲಿ ಶನಿವಾರ ಮದ್ಯಾಹ್ನ ದಾಳಿ ಮಾಡಿ ಜಮೀನಿನಲ್ಲಿ ಹೂತ್ತಿಟ್ಟ ಸುಮಾರು ೨೦೦ ಲೀಟರ್‌ಗೂ ಅಧಿಕ ಕಚ್ಚಾ ಸಾಮಗ್ರಿಗಳನ್ನು ನಾಶ ಪಡಿಸಿದ್ದಾರೆ.

ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಸರ್ಕಾರವು ಮದ್ಯ ಮಾರಾಟವನ್ನು ಸ್ಥಗಿತಗೊಳಿಸಿದ್ದರಿಂದ ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ಕೆಲವರು ಕಳ್ಳಭಟ್ಟಿ ಸರಾಯಿ ತಯಾರಿಸಿ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ೨೦೦ ಲೀಟರ್‌ಗೂ ಕಳ್ಳಭಟ್ಟಿ ಸರಾಯಿ ಹಾಗೂ ಅಧಿಕ ಕಚ್ಚಾ ಸಾಮಗ್ರಿಗಳನ್ನು ನಾಶಪಡಿಸಿದ್ದಾರೆ. ದಾಳಿ ಸಮಯದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಎಂ.ಎಸ್.ಅವಟಿ, ಆರ್.ಎಸ್.ವಡೆಯರ, ಡಿ.ಬಿ.ಕಳ್ಳಿಗುಡ್ಡ, ಜಿ.ಎಂ.ನಾಯಕ, ಸೋಮು ರಾಠೋಡ, ಮೊದಲಾದವರು ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ