Breaking News
Home / Uncategorized / ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷ ಪೂರೈಕೆ- ಸಾಧನೆ ಪಟ್ಟಿ ಬಿಡುಗಡೆ ಮಾಡಿದ ಲಖನ್ ಜಾರಕಿಹೋಳಿ

ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷ ಪೂರೈಕೆ- ಸಾಧನೆ ಪಟ್ಟಿ ಬಿಡುಗಡೆ ಮಾಡಿದ ಲಖನ್ ಜಾರಕಿಹೋಳಿ

Spread the love

 

 

ಗೋಕಾಕ್- ಲಖನ್ ಜಾರಕಿಹೋಳಿ ಅವರು ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷದ ಅವಧಿ ಪೂರೈಸಿದ್ದಾರೆ. ಈ ಸಂದರ್ಭದಲ್ಲಿ ಅವರು ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೈಗೊಂಡ ಅಭಿವೃದ್ಧಿ ಕಮಗಾರಿಗಳ ವಿವರ ಬಿಡುಗಡೆ ಮಾಡಿದ್ದಾರೆ

 

ವಿಧಾನಪರಿಷತ್ ಸದಸ್ಯರಾದ ನಂತರ ಬಿಡುಗಡೆಯಾದ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಒಟ್ಟು 2ಕೋಟಿ ರೂಪಾಯಿ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 1ಕೋಟಿ ರೂಪಾಯಿ ಹೀಗೆ 3ಕೋಟಿ ಅನುದಾನವನ್ನು ತಾವು ಪ್ರತಿನಿಧಿಸುವ ಕ್ಷೇತ್ರದ ಜನರಿಗಾಗಿ ಖರ್ಚು ಮಾಡಿರುವುದಾಗಿ ತಿಳಿಸಿದ್ದಾರೆ.

 

ತಾವು ಖರ್ಚು ಮಾಡಿದ ಅನುದಾನಗಳ ದಾಖಲೆ‌ ಬಿಡುಗಡೆ ಮಾಡಿದ ಅವರು, ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕು, ಸಮುದಾಯ, ಜಾತಿ, ಜನಾಂಗಕ್ಕೆ ನ್ಯಾಯ ಒದಗಿಸಿ ಅನುದಾನ ಹಂಚಿಕೆ ಮಾಡಿ ಬಿಡುಗಡೆ ಮಾಡಿದ್ದಾರೆ

 

ಗ್ರಾಮೀಣ ಪ್ರದೇಶದ ರಸ್ತೆ,ಸಮುದಾಯ ಭವನ ಸೇರಿ ವಿವಿಧ ಕಾಮಗಾರಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ತಮ್ಮ ಅನುದಾನ ಬಿಡುಗಡೆ ಮಾಡಿ ಗ್ರಾಮೀಣ ಜನರ ಸಮಸ್ಯೆಗೆ ಸ್ಪಂದನೆ ಮಾಡಿದ್ದಾರೆ

 

ತಮಗೆ ಸಿಕ್ಕ ಒಂದೇ ವರ್ಷದಲ್ಲಿ ನೀಡಿದ ಭರವಸೆಯಂತೆ ಸರ್ಕಾರದ ಅನುದಾನ ಸಮರ್ಪಕ ಬಳಕೆ ಮಾಡುವುದರ ಜೊತೆ ವೈಯಕ್ತಿಕವಾಗಿ ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ


Spread the love

About Laxminews 24x7

Check Also

ಅದಾನಿ ಮ್ಯಾನೇಜರ್‌ ಮಾತ್ರ, ದುಡ್ಡೆಲ್ಲಾ ಪ್ರಧಾನಿ ನರೇಂದ್ರ ಮೋದಿಯದ್ದು: ಕೇಜ್ರಿವಾಲ್

Spread the love ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ