ಬೆಳಗಾವಿ: ರಾಜ್ಯ ಸರ್ಕಾರದ ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಖಂಡಿಸಿ ಬೆಳಗಾವಿ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಇಲ್ಲಿ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಿದರು. ಬಿಜೆಪಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.
ಬಿಜೆಪಿ ಸರ್ಕಾರವು ವಿದ್ಯುತ್ ದರವನ್ನು ಸರಾಸರಿ 5.4 ರಂತೆ ಪ್ರತಿ ಯೂನಿಟ್ ಗೆ 40 ಪೈಸೆ ಹೆಚ್ಚಳ ಮಾಡಿದೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಆದ ಕಾರಣ ಸರ್ಕಾರ ಎಚ್ಚೆತ್ತುಕೊಂಡು ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ರಾಜೇಂದ್ರ ಪಾಟೀಲ್, ಜಯಶ್ರೀ ಮಾಳಗಿ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
Laxmi News 24×7