ಬೆಂಗಳೂರು: ಸಚಿವ ಕೆ.ಎಸ್ ಈಶ್ವರಪ್ಪ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವ್ರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವ್ರು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿಡುವ ಡಿಕೆಶಿ, ‘ಬಿಜೆಪಿ ಸರ್ಕಾರದ ಹಿರಿಯ ಸಚಿವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದು, ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಹಾಗಾಗಿ ಅವ್ರು ಈ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡ್ಬೇಕು. ಇಲ್ಲವೇ ಈಶ್ವರಪ್ಪ ಆರೋಪ ಸುಳ್ಳೆಂದು ಅವರನ್ನ ಸಚಿವ ಸಂಪುಟದಿಂದ ವಜಾ ಮಾಡ್ಬೇಕು’ ಎಂದು ಆಗ್ರಹಿಸಿದ್ದಾರೆ.
A senior BJP Minister has made very serious accusations against CM Yediyurappa in a letter to the Governor.
The CM must either immediately submit his resignation or must sack the Minister if the accusations aren't true.
Karnataka's BJP Government has become a den of corruption.
— DK Shivakumar (@DKShivakumar) March 31, 2021
ಅಂದ್ಹಾಗೆ, ಗ್ರಾಮೀಣಾಭಿವೃದ್ದಿ ಸಚಿವ ಕೆಎಸ್ ಈಶ್ವರಪ್ಪನವ್ರು, ರಾಜ್ಯಪಾಲ ವಜುಬಾಯಿ ವಾಲಾ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಪತ್ರ ಬರೆದಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವ್ರು ನನ್ನ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
Laxmi News 24×7