Breaking News

ಅ.28, 29ರಂದು ಬೆಳಗಾವಿ ಜಿಲ್ಲೆಯಲ್ಲಿ ಸರ್ಕಾರದ ವಿವಿಧ ನೇಮಕಾತಿ ಪರೀಕ್ಷೆ ನಡೆಯಲಿದೆ.:D.C.

Spread the love

ಬೆಳಗಾವಿ: ಜಿಲ್ಲೆಯಲ್ಲಿ 28 ಹಾಗೂ 29 ರಂದು ಸರ್ಕಾರದ ವಿವಿಧ ನೇಮಕಾತಿ ಪರೀಕ್ಷೆಗಳು ನಡೆಯಲಿವೆ. ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಮಾರ್ಗಸೂಚಿ ಪ್ರಕಾರ ಸುರಕ್ಷಿತವಾಗಿ ಸಾಗಣೆ ಮಾಡುವುದು ಸೇರಿದಂತೆ ಒಟ್ಟಾರೆ ಪರೀಕ್ಷೆಯನ್ನು ಸುಗಮ ಮತ್ತು ಸುಸೂತ್ರವಾಗಿ ನಡೆಸಲು ಜಾಗರೂಕತೆಯಿಂದ ಕೆಲಸ ಮಾಡಬೇಕೆಂದು ಎಂದು ಸಿಬ್ಬಂದಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.

 

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅ.28 ಹಾಗೂ 29 ರಂದು ವಿವಿಧ ನೇಮಕಾತಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಇಂದು ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಪ್ತ ಕಾರ್ಯದರ್ಶಿ, ಹಿರಿಯ ಸಹಾಯಕರು (ತಾಂತ್ರಿಕ) ಹಾಗೂ ತಾಂತ್ರಿಕೇತರ, ಪ್ರಥಮ ದರ್ಜೆ ಸಹಾಯಕರು, ಆಪ್ತ ಸಹಾಯಕರು, ಸೇಲ್ಸ್ ಮೇಲ್ವಿಚಾರಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಲಿವೆ. ಅ.28 ರಂದು ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ 8789 ಅಭ್ಯರ್ಥಿಗಳು ಹಾಗೂ ಅ.29 ರಂದು ಜಿಲ್ಲೆಯಲ್ಲಿ 30,940 ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಹೇಳಿದರು.

ನೇಮಕಾತಿ ಪರೀಕ್ಷೆಯಾಗಿರುವುದರಿಂದ ಯಾವುದೇ ಕಾರಣಕ್ಕೂ ಅಕ್ರಮ, ಲೋಪದೋಷ ಅಥವಾ ಗೊಂದಲಗಳಿಗೆ ಆಸ್ಪದ ನೀಡಬಾರದು. ಕೊಠಡಿ ಅಧೀಕ್ಷಕರು, ಮೇಲ್ವಿಚಾರಕರು ಹಾಗೂ ಜಾಗೃತ ದಳದ ಅಧಿಕಾರಿಗಳು ತಮಗೆ ವಹಿಸಲಾದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪರೀಕ್ಷೆಯ ಬಳಿಕ ಉತ್ತರಪತ್ರಿಕೆಗಳನ್ನು ಮಾರ್ಗಸೂಚಿಯ ಪ್ರಕಾರ ಬಿಗಿಭದ್ರತೆಯಲ್ಲಿ ಸುರಕ್ಷಿತವಾಗಿ ನಿಗದಿತ‌ ಸ್ಥಳಕ್ಕೆ ತಲುಪಿಸಬೇಕು. ಕರ್ತವ್ಯಲೋಪ ಅಥವಾ ಅಕ್ರಮ ಎಸಗಿರುವುದು ಕಂಡುಬಂದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಡಿಸಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದರು.

ಕರ್ತವ್ಯಲೋಪ-ಗೊಂದಲಕ್ಕೆ ಬೇಡ ಅವಕಾಶ: ಪರೀಕ್ಷಾ ಕರ್ತವ್ಯವನ್ನು ಯಾವುದೇ ಕಾರಣಕ್ಕೂ ಲಘುವಾಗಿ ಪರಿಗಣಿಸಬಾರದು. ಕರ್ತವ್ಯಲೋಪ ಅಥವಾ ಗೊಂದಲಗಳಿಗೆ ಅವಕಾಶ ಮಾಡಿಕೊಡದೇ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.


Spread the love

About Laxminews 24x7

Check Also

ನೂರಾರು ನವಜಾತ ಶಿಶುಗಳ ಜೀವ ಉಳಿಸಿದ ಲೇಡಿಗೋಷನ್ ಆಸ್ಪತ್ರೆ

Spread the loveಮಂಗಳೂರು: ಮಂಗಳೂರಿನ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆಯಲ್ಲಿ, ತಾಯಿಯ ಮಮತೆಯಷ್ಟೇ ಪವಿತ್ರವಾದೊಂದು ಕ್ರಾಂತಿಕಾರಿ ಯೋಜನೆ ನಿಶ್ಯಬ್ದವಾಗಿ ನಡೆಯುತ್ತಿದೆ. ‘ಅಮೃತ ಘಟಕ’ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ