Breaking News
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಡಬ್ಲಿಂಗ್ ಪ್ರಾಜೆಕ್ಟ್ ಕುರಿತು ನಡೆದ ಸಭೆಯಲ್ಲಿ ಕೇಂದ್ರ ರೇಲ್ವೇ ಸಚಿವ ಸುರೇಶ್ ಅಂಗಡಿಯವರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್

ಕೇಂದ್ರ ರೈಲ್ವೆ ಖಾತೆ ರಾಜ್ಯ  ಸಚಿವ ಸುರೇಶ ಅಂಗಡಿ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ.

Spread the love

ನವದೆಹಲಿ – ಕೇಂದ್ರ ರೈಲ್ವೆ ಖಾತೆ ರಾಜ್ಯ  ಸಚಿವ ಸುರೇಶ ಅಂಗಡಿ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ.

ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ನಿನ್ನೆಯಷ್ಟೆ ಬೆಳಗಾವಿಯಿಂದ ದೆಹಲಿಗೆ ತೆರಳಿರುವ ಅವರು ಅಲ್ಲಿ ಪರೀಕ್ಷೆಗೆ ಒಳಪಟ್ಟಿದ್ದಾರೆ. ರೋಗ ಲಕ್ಷಣಗಳಿಲ್ಲದಿದ್ದರೂ ಪಾಸಿಟಿವ್ ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಪಡುವಂತೆ ಅವರು ವಿನಂತಿಸಿದ್ದಾರೆ.

ಸುರೇಶ ಅಂಗಡಿ ಬೆಳಗಾವಿಯಲ್ಲಿ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದರು. ಅಲ್ಲದೆ ಅವರು ಬೆಳಗಾವಿ – ಧಾರವಾಡ ನೇರ ರೈಲ್ವೆ ಲೈನ್ ಗೆ ಮಂಜೂರು ಪಡೆದಿರುವುದರಿಂದ ಹಲವು ಸಂಘ ಸಂಸ್ಥೆಗಳ ಪದಾಧಿಕಾರಿಗಳು ನಿನ್ನೆ ಕೂಡ ಅವರನ್ನು ಸನ್ಮಾನಿಸಿದ್ದಾರೆ.  ಹಾಗಾಗಿ ಅನೇಕರಿಗೆ ಈಗ ಆತಂಕ ಶುರುವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ