Home / Uncategorized / ಲಾಕ್‍ಡೌನ್-5ರ ಮಾರ್ಗಸೂಚಿ ಪ್ರಕಟ…

ಲಾಕ್‍ಡೌನ್-5ರ ಮಾರ್ಗಸೂಚಿ ಪ್ರಕಟ…

Spread the love

ಬೆಂಗಳೂರು: ಲಾಕ್‍ಡೌನ್-5ರ ಮಾರ್ಗಸೂಚಿ ರಾಜ್ಯ ಸರ್ಕಾರ ಪ್ರಕಟಿಸಿದ್ದು, ಜೂನ್ 8 ರಿಂದ ಮಂದಿರ, ಮಸೀದಿ, ಚರ್ಚ್ ತೆರೆಯಲಿವೆ. ಜೂನ್ 8ರಿಂದಲೇ ಮಾಲ್ ಗಳು ಓಪನ್ ಆಗಲಿದ್ದು, ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡಿಲ್ಲ. ಜೂನ್ ಅಂತ್ಯದವರೆಗೂ ಶಾಲಾ-ಕಾಲೇಜುಗಳನ್ನು ಆರಂಭಗೊಳಿಸುವಂತಿಲ್ಲ.

ಮದುವೆಗಳ ಮೇಲಿನ ನಿರ್ಬಂಧ ಯಥಾಸ್ಥಿತಿ ಮುಂದುವರಿಯಲಿದೆ. ಕೇಂದ್ರ ಮಾರ್ಗಸೂಚಿಯಂತೆ ರಾಜ್ಯದಲ್ಲಿಯೂ ನೈಟ್ ಕರ್ಫ್ಯೂ ಸಡಿಲಿಕೆ ಮಾಡಲಾಗಿದ್ದು, ಜೂನ್ 30ರವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5ರವರಗೆ ಕರ್ಫ್ಯೂ ಇರಲಿದೆ. ಇನ್ನು ದೇವಸ್ಥಾನಗಳ ಸಂಬಂಧಿಸಿದ ನಿಯಮಗಳನ್ನು ರಾಜ್ಯ ಸರ್ಕಾರ ಸೋಮವಾರ ಪ್ರಕಟಿಸಲಿದೆ.

ಜೂನ್ 8ರಿಂದ ಏನಿರುತ್ತೆ?
* ಸಾರಿಗೆ ಬಸ್‍ಗಳು, ಖಾಸಗಿ ವಾಹನಗಳ ಓಡಾಟ
* ಮಾಲ್, ಹೋಟೆಲ್, ರೆಸ್ಟೋರೆಂಟ್
* ಎಲ್ಲ ಧಾರ್ಮಿಕ ಕೇಂದ್ರಗಳು
* ಆಟೋ, ಕ್ಯಾಬ್

ಜೂನ್ 8ರಿಂದ ಏನಿರಲ್ಲ?
* ಮೆಟ್ರೋ ಸಂಚಾರ
* ಅಡಿಟೋರಿಯಂ, ಜಿಮ್ ಕೇಂದ್ರಗಳು, ಥಿಯೇಟರ್ ಗಳು,
* ಸಾರ್ವಜನಿಕ ಈಜುಕೊಳಗಳು
* ಜೂನ್ 30ರವರೆಗೂ ಶಾಲಾ-ಕಾಲೇಜುಗಳು ಆರಂಭಿಸುವಂತಿಲ್ಲ
* ಸಿನಿಮಾ ಹಾಲ್, ಜಿಮ್ ಸೆಂಟರ್, ಸ್ವಿಮಿಂಗ್ ಪೂಲ್, ಮನರಂಜನಾ ಕೇಂದ್ರ/ಪಾರ್ಕ್, ಬಾರ್, ಸಭಾಂಗಣ ಮತ್ತು ಅತಿ ಹೆಚ್ಚು ಜನ ಸೇರುವ ಪ್ರದೇಶಗಳನ್ನು ತೆರೆಯುವಂತಿಲ್ಲ.
* ಸಾರ್ವಜನಿಕ/ರಾಜಕೀಯ/ಕ್ರೀಡೆ/ಮನರಂಜನೆ/ಶೈಕ್ಷಣಿಕ/ ಸಾಂಸ್ಕೃತಿಕ/ಧಾರ್ಮಿಕ ಸಭೆ ಸಮಾರಂಭಗಳನ್ನು ನಡೆಸುವಂತಿಲ್ಲ.

ಕೋವಿಡ್-19 ನಿಯಂತ್ರಣಕ್ಕೆ ನಿರ್ದೇಶನಗಳು:
1. ಮಾಸ್ಕ್: ಸಾರ್ವಜನಿಕ ಸ್ಥಳದಲ್ಲಿ, ಕಚೇರಿಯ ಒಳಗೆ, ಪ್ರಯಾಣದ ವೇಳೆ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು.
2. ಸಾಮಾಜಿಕ ಅಂತರ: ಒಬ್ಬೊರಿಂದ ಮತ್ತೊಬ್ಬರ ಮಧ್ಯೆ 6 ಅಡಿ ಅಂತರ ಕಾಯ್ದುಕೊಳ್ಳಬೇಕು.
3. ಸಭೆ-ಸಮಾರಂಭ: ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿ ಸಭೆ ಸಮಾರಂಭ ನಡೆಸುವಂತಿಲ್ಲ. ಮದುವೆಯಲ್ಲಿ 50ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಅತ್ಯಕ್ರಿಯೆ, ಅಂತಿಮನ ನಮನದ ವೇಳೆ 20ಕ್ಕಿಂತ ಹೆಚ್ಚು ಮಂದಿ ಭಾಗವಹಿಸುವಂತಿಲ್ಲ.
4. ದಂಡ: ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೆ ದಂಡ ವಿಧಿಸಲಾಗುವುದು. ಈ ಸಂಬಂಧ ರಾಜ್ಯ ಸರ್ಕಾರ, ಸ್ಥಳೀಯ ಆಡಳಿತಾಧಿಕಾರಿಗಳ ಸೂಚನೆಯಂತೆ ದಂಡ ವಿಧಿಸುವಂತೆ ಸೂಚಿಸಲಾಗಿದೆ.
5. ನಿಷೇಧ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಕುಡಿಯುವುದು, ಪಾನ್, ಗುಟ್ಕಾ, ತಂಬಾಕು ತಿನ್ನುವುದು, ಸಿಗರೇಟ್ ಸೇದುವುದು ನಿಷೇಧ.

6. ವರ್ಕ್ ಫ್ರಂ ಹೋಮ್: ಕಂಪನಿಗಳು, ಸಂಸ್ಥೆಗಳು ಸಾಧ್ಯವಾದಷ್ಟು ವರ್ಕ್ ಫ್ರಂ ಹೋಮ್ ಅನುಸರಿಸಬೇಕು.
7. ಮುಂಜಾಗ್ರತಾ ಕ್ರಮ: ಕೆಲಸ ಅಥವಾ ವ್ಯವಹಾರದ ಸಮಯದಲ್ಲಿ ಅಧಿಕಾರಿಗಳು, ಕೆಲಸದ ಸ್ಥಳ, ಅಂಗಡಿ, ಮಾರುಕಟ್ಟೆ, ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು.
8. ಸ್ಕ್ರೀನಿಂಗ್: ಕಂಪನಿ, ವ್ಯವಹಾರದ ಸ್ಥಳಗಲ್ಲಿ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಇರಲೇಬೇಕು. ಜೊತೆಗೆ ಸಿಬ್ಬಂದಿ ಒಳಗೆ ಹಾಗೂ ಹೊರಗೆ ಹೋಗುವ ಜಾಗದಲ್ಲಿ ಸ್ಯಾನಿಟೈಜರ್ ಇರಿಸಬೇಕು.

9. ಸ್ಯಾನಿಟೈಜೇಷನ್: ಕಚೇರಿಯ ಡೋರ್ ಹ್ಯಾಂಡಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ಆಗಾಗ ಸ್ಯಾನಿಟೈಜೇಷನ್ ಮಾಡಬೇಕು.
10. ಕೆಲಸ ವೇಳೆ ಸಾಮಾಜಿಕ ಅಂತರ: ಕಚೇರಿಯಲ್ಲಿ ಕೆಲಸ ಮಾಡುವಾಗ ಸಿಬ್ಬಂದಿಯ ಮಧ್ಯೆ ಅಂತರ ಇರಬೇಕು. ಜೊತೆಗೆ ಶಿಫ್ಟ್ ಗಳ ಮಧ್ಯೆ ಸ್ವಚ್ಛತೆ, ಸ್ಯಾನಿಟೈಜೇಷನ್ ಮಾಡಲು ಅನುಕೂಲವಾಗುವಂತೆ ಸಮಯದ ಅಂತರವಿರಬೇಕು.


Spread the love

About Laxminews 24x7

Check Also

ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ

Spread the loveಲೋಕಸಭಾ ಚುನಾವಣೆ ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ ಜಾರಿ ಬೆಂಗಳೂರು: ಲೋಕಸಭಾ ಚುನಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ