ಬೆಂಗಳೂರು, ಏಪ್ರಿಲ್ 6: ಸಮೀಕ್ಷೆಯೊಂದರ ಪ್ರಕಾರ 3,196 ವಲಸೆ ಕಟ್ಟಡ ಕಾರ್ಮಿಕರಿಗೆ ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದ ಪರಿಸ್ಥಿತಿ ನಿರ್ಮಾಣ ವಾಗಿದೆ. ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದ ಕಾರಣ ಏಪ್ರಿಲ್ 14ರವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿತ್ತು. ಇನ್ನೂ ಲಾಕ್‌ಡೌನ್ ಮುಂದುವರೆದರೆ ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದಂತಾಗಲಿದೆ. ಕಟ್ಟಡ ಕಾರ್ಮಿಕರಿಗೆ ಯಾವುದೇ ತೊಂದರೆಯಾಗುವುದಿಲ್ಲ , ಅವರಿಗೆ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದ್ದರೂ ಇದುವರೆಗೆ ಶೇ.42ರಷ್ಟು ವಲಸಿಗ ಕಟ್ಟಡ ಕಾರ್ಮಿಕರಿಗೆ ಪಡಿತರ ಸಿಕ್ಕಿಲ್ಲ.
ಎಲ್ಲಾ ರಾಜ್ಯ ಸರ್ಕಾರಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ಅಲ್ಲಿಂದ ಕಾರ್ಮಿಕರು ಹಣವನ್ನು ಪಡೆಯಬೇಕು. ಆದರೆ ಶೇ.94 ರಷ್ಟು ಮಂದಿ ಕಾರ್ಮಿಕರು ತಮ್ಮ ಗುರುತಿನ ಚೀಟಿ ಹೊಂದಿಲ್ಲ ಎಂಬುದು ವಿಷಾದದ ಸಂಗತಿಯಾಗಿದೆ.
ಶೀಘ್ರವೇ ವಲಸೆ ಕಾರ್ಮಿಕರಿಗೆ ಪಡಿತರವನ್ನು ವಿತರಣೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಅದರಲ್ಲಿ ಶೇ.55ರಷ್ಟು ಮಂದಿ ಕಾರ್ಮಿಕರು ದಿನಕ್ಕೆ 200-400 ರೂ ಹಣವನ್ನು ಪಡೆಯುವವರಿದ್ದಾರೆ. ಅದರಲ್ಲಿ ಕೌಶಲ್ಯವಿರುವ ಕಾರ್ಮಿಕರು ದೆಹಲಿಯಲ್ಲಿ ನಿತ್ಯ 600 ರೂ ಗಳಿಸುತ್ತಾರೆ.