ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸಮರ ಮುಂದುವರಿದಿದೆ. ಇಂದು ಮುಂಜಾನೆಯೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸುವ ಮೂಲಕ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದಾರೆ.
ಬೆಂಗಳೂರು: ನಗರದ ವಿವಿಧ ಬಡಾವಣೆಗಳಲ್ಲಿರುವ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ.
ಮೈಸೂರು: ಸಾಂಸ್ಕೃತಿಕ ನಗರಿಯಲ್ಲೂ ಲೋಕಾಯುಕ್ತ ಬಲೆ ಬೀಸಿದ್ದು, ಮಹತ್ವದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಬಾಗಲಕೋಟೆ: ಉತ್ತರ ಕರ್ನಾಟಕದ ಬಾಗಲಕೋಟೆಯಲ್ಲೂ ಅಧಿಕಾರಿಗಳ ತಂಡ ಬೀಡುಬಿಟ್ಟಿದೆ.
ಇದರ ಜೊತೆಗೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಕಾರ್ಯಾಚರಣೆ ವಿಸ್ತರಿಸುವ ಸಾಧ್ಯತೆಯಿದೆ.
ದಾಖಲೆಗಳ ಪರಿಶೀಲನೆ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ಆಸ್ತಿ ಪತ್ರಗಳು, ಬ್ಯಾಂಕ್ ಪಾಸ್ಬುಕ್ ಮತ್ತು ನಗದು ಹಣದ ಬಗ್ಗೆ ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಪ್ರಸ್ತುತ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ದಾಳಿಗೆ ಒಳಗಾದ ಅಧಿಕಾರಿಗಳ ಹೆಸರು ಮತ್ತು ವಶಪಡಿಸಿಕೊಳ್ಳಲಾದ ಅಕ್ರಮ ಆಸ್ತಿಯ ಸಂಪೂರ್ಣ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.
Laxmi News 24×7