Breaking News

ಮೈಸೂರು RFO ಮನೆ ಮೇಲೆ ಲೋಕಾ ದಾಳಿ – ಒಂದೇ ಅಪಾರ್ಟ್‌ಮೆಂಟ್‌ನಲ್ಲಿ 12 ಮನೆಗಳು, 130% ಅಧಿಕ ಪ್ರಮಾಣದ ಆಸ್ತಿ ಪತ್ತೆ

Spread the love

ಮೈಸೂರು: ಇಲ್ಲಿನ ಅರಣ್ಯ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಲಯ ಅರಣ್ಯಾಧಿಕಾರಿ ಸುರೇಂದ್ರ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ  ನಡೆಸಿದ ವೇಳೆ ಆದಾಯಕ್ಕಿಂತ ಅಧಿಕ ಆಸ್ತಿ ಪತ್ತೆಯಾಗಿದೆ. ಗಳಿಕೆಗಿಂತ 130% ಅಧಿಕ ಆಸ್ತಿ ಇರುವುದನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ದಾಳಿ ವೇಳೆ ಮೈಸೂರಿನ ಶ್ರೀರಾಂಪುರ ಬಡಾವಣೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ 12 ಮನೆಗಳನ್ನು ಹೊಂದಿರುವುದು ಗೊತ್ತಾಗಿದೆ. ಅಲ್ಲದೇ ಮನೆಯಲ್ಲಿ 350ಗ್ರಾಂ ಚಿನ್ನ ಸಹ ಪತ್ತೆಯಾಗಿದೆ. ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ನ.18 ರಂದು ಚಾಮರಾಜನಗರ ಲೋಕಾಯುಕ್ತ ಪೊಲೀಸರು ಅರಣ್ಯಾಧಿಕಾರಿ ಸುರೇಂದ್ರ ಅವರ ಮನೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹೊಂದಿರುವುದು ದೃಢಪಟ್ಟಿದೆ. ಸ್ಥಿರ ಮತ್ತು ಚರಾಸ್ತಿಗಳಿಗೆ ಸಂಬಂಧಿಸಿದ ದಾಖಲಾತಿಗಳನ್ನು ಅಮಾನತುಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರೋಪಿತ ಸರ್ಕಾರಿ ಅಧಿಕಾರಿಯ ಮನೆ ಹಾಗೂ ಕಛೇರಿಗಳ ಮೇಲೆ ಚಾಮರಾಜನಗರ ಮತ್ತು ಮೈಸೂರು ಲೋಕಾಯುಕ್ತ ಪೊಲೀಸ್ ಠಾಣೆಯ ಸಿಬ್ಬಂದಿ ದಾಳಿ ನಡೆಸಿದ್ದರು.


Spread the love

About Laxminews 24x7

Check Also

ಚುನಾವಣೆಯನ್ನು ಬಹಿಷ್ಕರಿಸುವುದಿಲ್ಲ, ವ್ಯವಸ್ಥೆಯೊಳಗೇ ಹೋರಾಟ: ರಾಹುಲ್ ಗಾಂಧಿ

Spread the loveನವದೆಹಲಿ: ವಿರೋಧ ಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸುವುದಿಲ್ಲ. ಬದಲಾಗಿ, ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕವೇ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಹೋರಾಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ