Breaking News

ತಿಗಡಿ ಗ್ರಾಮದಲ್ಲಿ ಮಾರುತಿ ಜಾತ್ರಾ ಸಂಭ್ರಮ: ಭಕ್ತಿಪರವಶತೆಯಿಂದ ಜರುಗಿದ ಭವ್ಯ ರಥೋತ್ಸವ

Spread the love

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಶ್ರೀ ಮಾರುತಿ ಜಾತ್ರಾ ಮಹೋತ್ಸವವು ಸಡಗರ-ಸಂಭ್ರಮದಿಂದ ಜರುಗಿದೆ. ಎರಡು ದಿನಗಳ ಕಾಲ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾರುತಿ ರಾಯನ ಕೃಪೆಗೆ ಪಾತ್ರರಾದರು.
ತಿಗಡಿ ಗ್ರಾಮದ ಆರಾಧ್ಯ ದೈವ ಶ್ರೀ ಮಾರುತಿ ದೇವರ ಜಾತ್ರಾ ಮಹೋತ್ಸವವು ಪ್ರತಿ ವರ್ಷದಂತೆ ಈ ಬಾರಿಯೂ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಜಾತ್ರೆಯ ಮೊದಲ ದಿನದಂದು ದೇವಸ್ಥಾನದಲ್ಲಿ ಮಾರುತಿ ದೇವರಿಗೆ ವಿಶೇಷ ಅಭಿಷೇಕ ಹಾಗೂ ರುದ್ರಾಭಿಷೇಕಗಳನ್ನು ನೆರವೇರಿಸಲಾಯಿತು. ಬೆಳಗಿನಿಂದಲೇ ದೇವಸ್ಥಾನಕ್ಕೆ ಭಕ್ತ ಸಾಗರ ಹರಿದು ಬಂದಿದ್ದು, ಮಧ್ಯಾಹ್ನ ಭಕ್ತರಿಗಾಗಿ ಆಯೋಜಿಸಲಾಗಿದ್ದ ಅನ್ನಪ್ರಸಾದ ವ್ಯವಸ್ಥೆಯಲ್ಲಿ ನೂರಾರು ಜನ ಭಾಗಿಯಾದರು. ಧಾರ್ಮಿಕ ವಿಧಿವಿಧಾನಗಳ ಮೂಲಕ ಆರಂಭವಾದ ಜಾತ್ರೆಯು ಗ್ರಾಮದಲ್ಲಿ ಭಕ್ತಿಯ ವಾತಾವರಣ ನಿರ್ಮಿಸಿತ್ತು.
ಜಾತ್ರೆಯ ಎರಡನೇ ದಿನ ನಡೆದ ಮಾರುತಿ ದೇವರ ರಥೋತ್ಸವವು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಡೊಳ್ಳು-ಕುಣಿತ ಹಾಗೂ ವಾದ್ಯಗೋಷ್ಠಿಗಳ ಭೋರ್ಗರೆಯ ನಡುವೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ರಥೋತ್ಸವ ಅದ್ದೂರಿಯಾಗಿ ಸಾಗಿತು. ಗ್ರಾಮದ ಮಹಿಳೆಯರು ರಥಕ್ಕೆ ವಿಶೇಷ ಪೂಜೆ ಸಲ್ಲಿಸಿ ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಪ್ರಾರ್ಥಿಸಿದರು. ಕೇವಲ ತಿಗಡಿ ಗ್ರಾಮಸ್ಥರು ಮಾತ್ರವಲ್ಲದೆ, ಸುತ್ತಮುತ್ತಲಿನ ಹಳ್ಳಿಗಳ ಸಾವಿರಾರು ಭಕ್ತರು ರಥ ಎಳೆಯುವ ಮೂಲಕ ಸಂಭ್ರಮಿಸಿದರು.


Spread the love

About Laxminews 24x7

Check Also

ಶ್ರೀ ಹನುಮಂತನು ಸಾಟಿಯಿಲ್ಲದ ದೈಹಿಕ ಶಕ್ತಿ: ಸುರೇಶ ಯಾದವ್

Spread the loveಬೆಳಗಾವಿ: ರಾಮತೀರ್ಥ ನಗರ ರಹವಾಸಿಗಳಿಂದ ಕಣಬರ್ಗಿಯ ಕೆರೆ ರಸ್ತೆಯ ಶ್ರೀ ಹನುಮಾನ ಮಂದಿರದಲ್ಲಿ ಶ್ರೀ ಹನುಮಾನ ಜಯಂತಿಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ