ಬಾಗಲಕೋಟೆ: ನಾಮಪತ್ರ ಸಲ್ಲಿಕೆಗೆ ಮುನ್ನ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಕಾರ್ಯಕರ್ತರು ಸಂಪೂರ್ಣ ಸಜ್ಜಾಗಿದ್ದು, ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ವಿಜಯದ ದೃಢಸಂಕಲ್ಪ ಕೈಗೊಂಡಿರುವುದಾಗಿ ಹೇಳಿದರು.
ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರಲ್ಲಿ ಅಸಮಾಧಾನ ಹೆಚ್ಚಾಗಿದ್ದು, ಪಕ್ಷದ ಅಭಿವೃದ್ಧಿ ಪರ ರಾಜಕಾರಣ, ಸಂಘಟಿತ ಶಕ್ತಿ, ಕಾರ್ಯಕರ್ತರ ಉತ್ಸಾಹ ಹಾಗೂ ಮತದಾರರ ಆಶೀರ್ವಾದದಿಂದ ಈ ಬಾರಿ ಬಾಗಲಕೋಟೆಯಲ್ಲಿ ಕಮಲ ಅರಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಉಪಚುನಾವಣೆಯ ಫಲಿತಾಂಶ ರಾಜ್ಯದ ಮುಂದಿನ ರಾಜಕೀಯ ದಿಕ್ಕನ್ನು ನಿರ್ಧರಿಸುವಲ್ಲಿ ಪ್ರಮುಖವಾಗಲಿದೆ ಎಂದೂ ಅವರು ಹೇಳಿದರು.
ಈ ಸಂದರ್ಭದಲ್ಲಿ ಸಂಸದ ಜಗದೀಶ ಶೆಟ್ಟರ್, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಎಂ. ಕಾರಜೋಳ, ಸಂಸದ ಪಿ.ಸಿ. ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣ ಸಾ. ಭಾಂಢಗೆ, ಶಾಸಕ ಸಿದ್ದು ಸವದಿ, ಜಿಲ್ಲಾಧ್ಯಕ್ಷ ಶಾಂತನಗೌಡ ಪಾಟೀಲ, ಮಾಜಿ ಸಚಿವ ಬಿ. ಶ್ರೀರಾಮುಲು, ಮುರುಗೇಶ ನಿರಾಣಿ, ಮಾಜಿ ಸಚಿವ ಅರವಿಂದ ಲಿಂಬಾವಳಿ, ವಿಪ ಸದಸ್ಯ ಪಿ.ಎಚ್. ಪೂಜಾರ ಹಾಗೂ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
Laxmi News 24×7