Breaking News

ಇನ್‌ಸ್ಟಾದಲ್ಲಿ ಪರಿಚಯವಾಗಿ ಲವ್‌ – ಲಿವ್‌ಇನ್‌ ಗೆಳತಿಯ ಕತ್ತು ಹಿಸುಕಿ ಕೊಲೆ

Spread the love

ಬೆಂಗಳೂರು: ತನ್ನ ಲಿವ್‌ ಇನ್‌ ಗೆಳತಿಯನ್ನ  ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ಬೆಂಗಳೂರಿನ ಮಲ್ಲೇಶ್ವರದ ಮನೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಅನುಷಾ (20) ಕೊಲೆಯಾದ ಯುವತಿಯಾಗಿದ್ದು, ಶರತ್(25) ಬಂಧಿತ ಆರೋಪಿಯಾಗಿದ್ದಾನೆ. ಘಟನೆ ಸಂಬಂಧ ಈಗಾಗಲೇ ಆರೋಪಿಯನ್ನ ಬಂಧಿಸಲಾಗಿದೆ.

ಶರತ್‌ ಹಾಗೂ ಅನುಷಾ ಹಾಸನ ಮೂಲದವರು, ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದರು. ಶರತ್‌ ವಾಟರ್‌ ಟ್ಯಾಂಕ್‌ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. 6 ತಿಂಗಳಿನಿಂದ ಇ ಜೋಡಿ ಮಲ್ಲೇಶ್ವರದಲ್ಲಿ ಲಿವ್‌ ಇನ್‌ನಲ್ಲೇ ವಾಸವಿದ್ದರು. ಆದ್ರೆ ವೈಯಕ್ತಿಕ ವಿಚಾರಕ್ಕೆ ಜಗಳ ನಡೆದು ಕೊಲೆಯಾಗಿದೆ.

ಕೊಲೆಯಾದ ಬಗ್ಗೆ ಶರತ್ ಸೋಮವಾರ ವಕೀಲರಿಗೆ ವಿಚಾರ ತಿಳಿಸಿದ್ದ‌. ಬಳಿಕ ವಕೀಲರು ಪೊಲೀಸರಿಗೆ ವಿಚಾರ ತಿಳಿಸಿದ್ರು. ಬಳಿಕ ಶೇಷಾದ್ರಿಪುರಂ ಪೊಲೀಸರು ಪರಿಶೀಲನೆ ನಡೆಸಿ, ಕೇಸ್‌ ದಾಖಲಿಸಿಕೊಂಡು ಆರೋಪಿಯನ್ನ ಬಂಧಿಸಿದ್ರು.

ಸದ್ಯ ಅನುಷಾ ಮೃತದೇಹವನ್ನ ಪೋಷಕರಿಗೆ ಹಸ್ತಾಂತರಿಸಿದ್ದು, ಆರೋಪಿ ಶರತ್‌ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ