ಬೆಳಗಾವಿ : ಜಿಲ್ಲೆಯಲ್ಲಿ ಅಗತ್ಯ ಸೇವೆ ಹೊರತು ಪಡೆಸಿ ಉಳಿದೆಲ್ಲ ಅಂಗಡಿ, ಮಳಿಗೆಗಳನ್ನು ಏಕಾಏಕಿ ಪೊಲೀಸರು ಇಂದು ಮಧ್ಯಾಹ್ನ ಬಂದ್ ಮಾಡಿಸಿದ್ದು, ವ್ಯಾಪಾರಿಗಳು, ಜನರು ಕಂಗಾಲಾಗಿದ್ದಾರೆ.
ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೊಳಿಸಿತ್ತು. ಆದರೆ ಇಂದು ಮಧ್ಯಾಹ್ನ ಮತ್ತೊಂದು ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸರ್ಕಾರದ ಈ ನಿರ್ಧಾರದಿಂದ ಜನರು, ವ್ಯಾಪಾರಿಗಳು ಫುಲ್ ಶಾಕ್ ಆಗಿದ್ದಾರೆ.
ಬೆಳಗಾವಿ ನಗರ, ಗೋಕಾಕ, ಘಟಪ್ರಬಾ ಸೇರಿದಂತೆ ಜಿಲ್ಲೆಯಾದ್ಯಂತ ಅಗತ್ಯ ಸೇವೆಯಾದ ಔಷಧಿ, ಬಸ್ , ವೈನ್ ಶಾಫ್, ಹೋಟೆಲ್ ಗಳಿಗೆ ಅವಕಾಶ ನೀಡಿ, ಉಳಿದೆಲ್ಲಾ ಅಂಗಡಿಗಳನ್ನು ಸಂಪೂರ್ಣ ಬಂದ್ ಮಾಡಿಸಿದ್ದಾರೆ. ಇದರಿಂದ ವ್ಯಾಪಾರಿಗಳು ಕಂಗಾಲಾಗಿದ್ದಾರೆ.
ಸರ್ಕಾರ ಹಳೆ ಮಾರ್ಗಸೂಚಿಯ ಪ್ರಕಾರವೇ ವ್ಯಾಪಾರಿಗಳು ವಹಿವಾಟು ನಡೆಸಿದ್ದರು. ಆದರೆ ಧಿಡೀರ್ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿ, ಅಂಗಡಿಗಳನ್ನು ಬಂದ್ ಮಾಡಿಸಿರುವುದರಿಂದ ವ್ಯಾಪಾರಿಗಳು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??
*ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576*
*Laxmi News*