Breaking News
CREATOR: gd-jpeg v1.0 (using IJG JPEG v62), quality = 82?

ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಬೆಳಗಾವಿಯಲ್ಲಿ ಪ್ರೇಯಸಿಯನ್ನೇ ಕೊಂದ ಪ್ರಿಯಕರ

Spread the love

ಬೆಳಗಾವಿ; ಮದುವೆಯಾಗುವುದಾಗಿ ನಂಬಿಸಿ ನಾಲ್ಕು ವರ್ಷಗಳ ಕಾಲ ಪ್ರೀತಿಸಿದ ಯುವಕ, ಕೊನೆಗೆ ಮದುವೆಯಾಗುವಂತೆ ಒತ್ತಾಯಿಸಿದ ಯುವತಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರಾಯಬಾಗ ತಾಲೂಕಿನ ಹಾರುಗೇರಿ ಗ್ರಾಮದ ರಕ್ಷಿತಾ ಸಾರಿಕರ್ (25) ಕೊಲೆಯಾದ ಯುವತಿ. ಅಥಣಿ ತಾಲೂಕಿನ ಅಡಳಹಟ್ಟಿ ಗ್ರಾಮದ ಬಸಪ್ಪ ಸಿದ್ದಪ್ಪ ಸಾತನ್ನವಣ್ಣರ ಕೊಲೆ ಆರೋಪಿಯಾಗಿದ್ದಾನೆ.

ಆರೋಪಿ ಬಸಪ್ಪ ಕಳೆದ ನಾಲ್ಕು ವರ್ಷಗಳಿಂದ ರಕ್ಷಿತಾಳನ್ನು ಪ್ರೀತಿಸುತ್ತಿದ್ದು, ಮದುವೆಯಾಗುವುದಾಗಿ ಭರವಸೆ ನೀಡಿದ್ದ ಎನ್ನಲಾಗಿದೆ. ಆದರೆ ಮದುವೆಯ ವಿಚಾರ ಬಂದಾಗಲೆಲ್ಲ ಮುಂದೂಡುತ್ತಾ ಬಂದಿದ್ದ. ಇದರಿಂದ ಅಸಮಾಧಾನಗೊಂಡಿದ್ದ ರಕ್ಷಿತಾಳನ್ನು ಅಕ್ಟೋಬರ್ 28ರಂದು ಹಾರುಗೇರಿಯಿಂದ ಗೋಕಾಕ್ ಫಾಲ್ಸ್‌ಗೆ ಕರೆದುಕೊಂಡು ಹೋಗಿದ್ದಾನೆ.

ಸಂಜೆ ಸುಮಾರು 4 ಗಂಟೆ ವೇಳೆಗೆ ಫಾಲ್ಸ್ ರಸ್ತೆಯ ಪಕ್ಕದ ಕಟ್ಟೆಯ ಮೇಲೆ ಇಬ್ಬರೂ ಕುಳಿತು ಮಾತನಾಡುತ್ತಿದ್ದಾಗ, ಮದುವೆಯಾಗುವುದಾಗಿ ಹೇಳಿ ನಾಲ್ಕು ವರ್ಷ ಕಳೆದರೂ ಇದೀಗ ಮದುವೆಯಾಗಲು ಏಕೆ ಹಿಂದೇಟು ಹಾಕುತ್ತಿದ್ದೀಯ ಎಂದು ರಕ್ಷಿತಾ ಪ್ರಶ್ನಿಸಿದ್ದಾಳೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಈ ವೇಳೆ ಕೋಪಗೊಂಡ ಬಸಪ್ಪ, ರಕ್ಷಿತಾಳ ಕೆನ್ನೆಗೆ ಬಲವಾಗಿ ಹೊಡೆದು, ಬಳಿಕ ಕೈಯಿಂದ ಕುತ್ತಿಗೆ ಹಿಸುಕಿ ವೇಲಿನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ ಎಂದು ಯುವತಿಯ ಕುಟುಂಬಸ್ಥರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಕೊಲೆ ಮಾಡಿದ ಬಳಿಕ ಮೃತದೇಹವನ್ನು ಗೋಕಾಕ್ ಫಾಲ್ಸ್‌ನ ಗುಡ್ಡದ ಇಳಿಜಾರಿನಲ್ಲಿರುವ ಮುಳ್ಳಿನ ಪೊದೆಗಳ ಮಧ್ಯೆ ಎಸೆದು, ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಡಿಸೆಂಬರ್ ಅಂತ್ಯಕ್ಕೆ ವಿಜಯಪುರದಲ್ಲಿ ವಿಮಾನ ಹಾರಾಟ – ಎಂ.ಬಿ ಪಾಟೀಲ್

Spread the loveವಿಜಯಪುರ: ಇದೇ ಡಿಸೆಂಬರ್ ಅಂತ್ಯದೊಳಗೆ ವಿಜಯಪುರದಲ್ಲಿ ವಿಮಾನ ಹಾರಾಟ ಪ್ರಾರಂಭಗೊಳ್ಳಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ