Breaking News

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಬೇಡಿಕೆ?

Spread the love

ದೆಹಲಿ: ‘ಯಡಿಯೂರಪ್ಪ ಅವರನ್ನು ಪದಚ್ಯುತಿ ಮಾಡುವುದಾದರೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ತಮಗೆ ಕೊಡಬೇಕು’ ಎಂದು ಹಾಲಿ ಉಪಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ಬೇಡಿಕೆ ಇಟ್ಟಿದ್ದಾರೆಯೇ?

ಇಂತಹದೊಂದು ಚರ್ಚೆ ದೆಹಲಿ ಮಟ್ಟದ ನಾಯಕರ ವಲಯದಲ್ಲಿ ಹರಿದಾಡುತ್ತಿದೆ.

ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಇತ್ತೀಚೆಗೆ ದೆಹಲಿಯಲ್ಲಿ ಭೇಟಿಯಾದ ವಿಜಯೇಂದ್ರ, ಈ ಬೇಡಿಕೆಯ ಜತೆಗೆ ಯತ್ನಾಳ ಹಾಗೂ ಯೋಗೇಶ್ವರ್ ಅವರನ್ನು ಉಚ್ಛಾಟಿಸಬೇಕು ಎಂಬ ಅಹವಾಲನ್ನೂ ಸಲ್ಲಿಸಿದ್ದಾರೆ.

‘ಭಿನ್ನಮತೀಯರಿಗೆ ತಕ್ಕ ಶಾಸ್ತಿ ಕಲಿಸುವ ಬಗ್ಗೆ ವರಿಷ್ಠರು ಭರವಸೆ ಕೊಟ್ಟಿದ್ದು, ಸದ್ಯದಲ್ಲೇ ಅವರೆಲ್ಲರ ವಿರುದ್ಧ ಶಿಸ್ತು ಕ್ರಮ ಜರುಗಲಿದೆ ಎಂಬ ಸುದ್ದಿಯನ್ನು ಈ ಬೆಳವಣಿಗೆ ಬೆನ್ನಲ್ಲೇ ಹರಿಬಿಡಲಾಯಿತು. ಪಕ್ಷದ ಅಧ್ಯಕ್ಷ ಸ್ಥಾನದ ಮೇಲೆ ವಿಜಯೇಂದ್ರ ಕಣ್ಣಿಟ್ಟಿರುವ ಕಾರಣಕ್ಕೆ, ಈಗಿನ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ದುರ್ಬಲ ಅಧ್ಯಕ್ಷ ಎಂದು ಬಿಂಬಿಸುವ ಯತ್ನವೂ ನಡೆಯುತ್ತಿದೆ’ ಎಂದೂ ಬಿಜೆಪಿ ಮೂಲಗಳು ಹೇಳುತ್ತಿವೆ.


Spread the love

About Laxminews 24x7

Check Also

ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು,

Spread the loveಮೈಸೂರು: ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಸುರಕ್ಷತಾ ಕ್ರಮವಾಗಿ ಕಂಪನಿಯ ಟ್ರೈನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ