Breaking News

ಕೋಟಿ ಒಡೆಯನಾದ ಮಾದಪ್ಪ; 27 ದಿನಗಳಲ್ಲಿ 2.50 ಕೋಟಿ ರೂ. ಕಾಣಿಕೆ ಸಂಗ್ರಹ

Spread the love

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ನಡೆದಿದ್ದು, 27 ದಿನಗಳ ಅವಧಿಯಲ್ಲಿ 2.50 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

ದೀಪಾವಳಿ ಜಾತ್ರೆ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಭಕ್ತರು ಮಾದಪ್ಪನ ಬೆಟ್ಟಕ್ಕೆ ಭೇಟಿ ನೀಡಿ ಭರಪೂರ ಕಾಣಿಕೆ ಅರ್ಪಿಸಿದ್ದಾರೆ. 27 ದಿನಗಳ ಅವಧಿಯಲ್ಲಿ ಹುಂಡಿಯಲ್ಲಿ 2,50,73,817 ರೂ. ಕಾಣಿಕೆ ಹರಿದುಬಂದಿದೆ.

ಕಾಣಿಕೆಯಲ್ಲಿ 8 ಗ್ರಾಂ ಚಿನ್ನ, 924 ಗ್ರಾಂ ಬೆಳ್ಳಿ ಕೂಡ ಸಂಗ್ರಹವಾಗಿದೆ. ಅಲ್ಲದೇ, ನಾಲ್ಕು ವಿದೇಶಿ ಕರೆನ್ಸಿ ನೋಟು ಪತ್ತೆಯಾಗಿವೆ. ಸಿಸಿಟಿವಿ ಕಣ್ಗಾವಲಿನಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆಯಿತು.


Spread the love

About Laxminews 24x7

Check Also

ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ತಾಂತ್ರಿಕ ದೋಷ – ಉತ್ಪಾದನೆ ಕುಂಠಿತ

Spread the loveರಾಯಚೂರು: ಜಿಲ್ಲೆಯ ಯರಮರಸ್‌ನಲ್ಲಿರುವ ವೈಟಿಪಿಎಸ್  ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಎರಡನೇ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಭಾರೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ