Breaking News

ನಾಳೆ ಬೆಳಗಾವಿಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಆಗಮನ: ಪ್ರಬುದ್ಧ ನಾಗರಿಕರೊಂದಿಗೆ ಸಂವಾದ

Spread the love

ಬೆಳಗಾವಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನವೆಂಬರ್ 28ರಂದು ಕುಂದಾನಗರಿ ಬೆಳಗಾವಿಗೆ ಭೇಟಿ ನೀಡಲಿದ್ದು, ನಗರದ ಪ್ರಬುದ್ಧ ನಾಗರಿಕರು ಹಾಗೂ ಸಾಮಾಜಿಕ ಕಾರ್ಯಕರ್ತರೊಂದಿಗೆ ಮಹತ್ವದ ಸಂವಾದ ನಡೆಸಲಿದ್ದಾರೆ.

ನಗರದ ಧರ್ಮನಾಥ ಭವನದಲ್ಲಿ ಮಧ್ಯಾಹ್ನ 3:30ಕ್ಕೆ ‘ಸೇವ್ ಡೆಮಾಕ್ರಸಿ ಫ್ರಮ್ ಅರಾಜಕತೆ’ ಎಂಬ ಶೀರ್ಷಿಕೆಯಡಿ ಈ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರಜಾಪ್ರಭುತ್ವದ ರಕ್ಷಣೆ, ದೇಶದ ಸುರಕ್ಷತೆ ಹಾಗೂ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಫಡ್ನವೀಸ್ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ.

ವಿರೋಧ ಪಕ್ಷಗಳ ಅಪಪ್ರಚಾರ ಹಾಗೂ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಜನಜಾಗೃತಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಕೂಡ ಭಾಗವಹಿಸಲಿದ್ದಾರೆ. ಸುಮಾರು 650ರಿಂದ 700 ಮಂದಿ ಪ್ರಬುದ್ಧ ನಾಗರಿಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಬಿಜೆಪಿ ಮುಖಂಡ ಎಂ.ಬಿ. ಝೀರಲಿ ಮಾಹಿತಿ ನೀಡಿದ್ದಾರೆ.

ಜಾತಿ, ಧರ್ಮ ಹಾಗೂ ಭಾಷೆಯ ಭೇದ ಮರೆತು ಬೆಳಗಾವಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಅನಿಲ್ ಬೆನಕೆ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಜೈಲಲ್ಲಿದ್ದಾಗಲೇ ವೈದ್ಯೆಯೊಂದಿಗೆ ಲವ್‌ – ಪೆರೋಲ್‌ ಮೇಲೆ ಬಂದು ಮದುವೆ, ರೇಪ್‌ & ಮರ್ಡರ್‌ ಅಪರಾಧಿ ಕಳ್ಳತನ ಕೇಸಲ್ಲಿ ಮತ್ತೆ ಅಂದರ್

Spread the loveತುಮಕೂರು: ಕೊಲೆ ಮತ್ತು ಅತ್ಯಾಚಾರ ಕೇಸಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯೊಬ್ಬ ಪೆರೋಲ್‌ ಮೇಲೆ ಹೊರಗೆ ಬಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ