Breaking News

ಜನ ಸಂದಣಿಯಿಂದ ಕೂಡಿರುತ್ತಿದ್ದ ಮೆಜೆಸ್ಟಿಕ್ ಬಸ್ ನಿಲ್ದಾಣ ಖಾಲಿ ಖಾಲಿ

Spread the love

ಯಾವಾಗಲೂ ಜನ ಸಂದಣಿಯಿಂದ ಕೂಡಿರುತ್ತಿದ್ದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲೋದಕ್ಕೆ ಬಿಡುತ್ತಿರಲಿಲ್ಲ ಜನ ಓಡೋಡಿ ಬರುತ್ತಿದ್ದರು. ಆದರೆ ಇಂದು ಬಸ್‍ಗಳ ಸಂಚಾರವಿದ್ದರೂ ಪ್ರಯಾಣಿಕರು ಮಾತ್ರ ಬೆರಳೆಣಿಕೆಯಷ್ಟು ಮಾತ್ರ ಕಾಣಸಿಗುತ್ತಿದ್ದಾರೆ.

ಹೌದು. ಇಂದು ಸರೋಜಿನ ಮಹಿಷಿ ವರದಿಯನ್ನ ಜಾರಿಗೆ ತರುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ನಾವು ಅರ್ಧ ಗಂಟೆಯಿಂದ ಕಾದರೂ ಜನ ಬರುತ್ತಿಲ್ಲ ಬಂದ್ ಅಂತ ಜನ ಭಯಪಡುತ್ತಿದ್ದಾರೆ. ವೋಲ್ವೋದಲ್ಲಂತೂ ಎರಡು ಪ್ರಯಾಣಿಕರು ಇದ್ದರೆ ಹೆಚ್ಚು ಎಂದು ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರು ಅಳಲು ತೋಡಿಕೊಂಡರು. ಬಂದ್ ಪರಿಣಾಮ ಬಿಎಂಟಿಸಿ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಸಂಪೂರ್ಣ ಭಣಗುಟ್ಟುತ್ತಿದೆ.

ಇತ್ತ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸರ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಪ್ರತಿ ಸರ್ಕಲ್‍ಗೂ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ ಬಸ್ ಸಂಚಾರ ಯಥಾಸ್ಥಿತಿಯಿದ್ದು, ಎಂದಿನಂತೆ ಬಿಎಂಟಿಸಿ, ಕೆಎಸ್ಆರ್‌ಟಿಸಿ ಬಸ್‍ಗಳು ಸಂಚರಿಸುತ್ತಿದೆ. ಆದರೆ ಜನರಿಲ್ಲದೆ ಮೆಜೆಸ್ಟಿಕ್ ಬಸ್ ನಿಲ್ದಾಣ ಮಾತ್ರ ಖಾಲಿ ಖಾಲಿ ಕಾಣಿಸುತ್ತಿದೆ.

ಡಿಸಿಪಿ ರಮೇಶ್ ಬಾನೋತ್ ನೇತೃತ್ವದಲ್ಲಿ ಭದ್ರತೆ ನಿಯೋಜಿಸಲಾಗಿದೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಕೂಡ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಮೆಜೆಸ್ಟಿಕ್‍ನಿಂದ ಫ್ರೀಡಂ ಪಾರ್ಕ್ ವರೆಗೂ ರ‍್ಯಾಲಿ ನಡೆಯಲಿರುವ ಹಿನ್ನೆಲೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಭಧ್ರತೆ ಒದಗಿಸಲಾಗಿದೆ. 1 ಕೆಎಸ್‌ಆರ್‌ಪಿ ತುಕಡಿ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹೊಯ್ಸಳ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಹಾಗೆಯೇ ರೈಲ್ವೆ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ. ಎಂದಿನಂತೆ ರೈಲುಗಳು ಸಂಚರಿಸಲಿದೆ. ಆದರೆ ಪ್ರಯಾಣಿಕರ ಸಂಖ್ಯೆಯಲ್ಲಿ ಶೇಕಡಾ 50ರಷ್ಟು ಇಳಿಕೆಯಾಗಿದೆ.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ