Breaking News

ಪೈಲಟ್ ಸಮಯಪ್ರಜ್ಞೆಯಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ಅನಾಹುತ

Spread the love

ಮಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಇಂದು ಸಂಜೆ ಸಂಭವಿಸಬಹುದಾಗಿದ್ದ ಭಾರೀ ವಿಮಾನ ದುರಂತವೊಂದು ಪೈಲಟ್‌ನ ಸಮಯಪ್ರಜ್ಞೆಯಿಂದ ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಈ ಘಟನೆಯಿಂದ ವಿಮಾನದಲ್ಲಿದ್ದ 229 ಪ್ರಯಾಣಿಕರು ಹಾಗೂ 7 ಮಂದಿ ಸಿಬ್ಬಂದಿ ಸೇರಿದಂತೆ ಒಟ್ಟು 236 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಸಂಜೆ 6:05 ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಬೇಕಿದ್ದ ಇಂಡಿಗೋ ವಿಮಾನವು ರನ್‌ವೇಯಲ್ಲಿ ಟೇಕ್-ಆಫ್  ಆಗಲು ಸಿದ್ಧವಾಗಿ ವೇಗ ಪಡೆದುಕೊಳ್ಳುತ್ತಿತ್ತು. ವಿಮಾನವು ಇನ್ನೇನು ನೆಲದಿಂದ ಮೇಲಕ್ಕೆ ಹಾರಬೇಕು ಎನ್ನುವ ಕೊನೆಯ ಕ್ಷಣದಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.

ತಾಂತ್ರಿಕ ದೋಷವನ್ನು ತಕ್ಷಣವೇ ಗಮನಿಸಿದ ಪೈಲಟ್, ಯಾವುದೇ ವಿಳಂಬ ಮಾಡದೆ ಕೂಡಲೇ ಬ್ರೇಕ್ ಹಾಕಿ ಟೇಕ್-ಆಫ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದಾರೆ. ಅಪಾಯಕಾರಿ ಎಂದೇ ಕರೆಯಲ್ಪಡುವ ಮಂಗಳೂರಿನ ಟೇಬಲ್ ಟಾಪ್ ರನ್‌ವೇಯಲ್ಲಿ ವಿಮಾನವನ್ನು ಅತ್ಯಂತ ಚಾಕಚಕ್ಯತೆಯಿಂದ ನಿಯಂತ್ರಿಸಿದ ಪೈಲಟ್, ಬಳಿಕ ವಿಮಾನವನ್ನು ಸುರಕ್ಷಿತವಾಗಿ ಬೇ (Bay) ಗೆ ಕರೆತಂದಿದ್ದಾರೆ.

ವಿಮಾನ ನಿಂತ ತಕ್ಷಣವೇ ಸಿಬ್ಬಂದಿ ವರ್ಗವು ಎಲ್ಲಾ 229 ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಕೆಳಗಿಳಿಸಿದೆ. ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಇಂಡಿಗೋ ಸಂಸ್ಥೆಯು ಬೆಂಗಳೂರಿಗೆ ತೆರಳಲು ಬದಲಿ ವಿಮಾನದ ವ್ಯವಸ್ಥೆಯನ್ನು ಮಾಡಿದೆ. ಪೈಲಟ್ ತೆಗೆದುಕೊಂಡ ಕ್ಷಿಪ್ರ ನಿರ್ಧಾರದಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ತಪ್ಪಿದಂತಾಗಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ, ಮೇಘಾಲಯದಲ್ಲಿ ಮತದಾರರ ಪಟ್ಟಿಯ SSRಗೆ ಚುನಾವಣಾ ಆಯೋಗ ಆದೇಶ

Spread the loveನವದೆಹಲಿ: ಕರ್ನಾಟಕ  ಮತ್ತು ಮೇಘಾಲಯ ರಾಜ್ಯಗಳಲ್ಲಿ 2027ರ ಜನವರಿ 1 ಅನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ಮತದಾರರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ