Breaking News

ಇಂದು ರಾಜ್ಯಕ್ಕೆ ‘AICC’ ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ ಆಗಮನ : ಅದ್ದೂರಿ ಸ್ವಾಗತಕ್ಕೆ ‘ಕೈ’ ನಾಯಕರು ಸಜ್ಜು

Spread the love

ಬೆಂಗಳೂರು ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ನಂತರ ಇಂದು ಮೊದಲು ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರಿಗೆ ಭವ್ಯ ಸ್ವಾಗತ ನೀಡಲು ರಾಜ್ಯ ಕಾಂಗ್ರೆಸ್ ಸಜ್ಜಾಗಿದೆ. ಜೊತೆಗೆ ಸರ್ವೋದಯ ಸಮಾವೇಶ ಹೆಸರಿನಲ್ಲಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿದೆ.

 

ಕೆಪಿಸಿಸಿ ವತಿಯಿಂದ ನವೆಂಬರ್ 6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ‘ಸರ್ವೋದಯ ಸಮಾವೇಶ’ ಎಂದು ನಾಮಕರಣ ಮಾಡಲಾಗಿದೆ.

 

ಖರ್ಗೆ ರಾಜ್ಯಕ್ಕೆ ಆಗಮನದ ಹಿನ್ನೆಲೆ ಕೈ ನಾಯಕರು ಭರ್ಜರಿ ಸಿದ್ದತೆ ನಡೆಸಿದ್ದು, ಅರಮನೆ ಮೈದಾನದಲ್ಲಿ ಸರ್ವೋದಯ ಸಮಾವೇಶ ನಡೆಸಲಾಗುತ್ತಿದೆ. ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಖರ್ಗೆಗೆ ಅದ್ದೂರಿ ಸ್ವಾಗತ ಸಿಗಲಿದ್ದು, ಇಂದು ಮಧ್ಯಾಹ್ನ 2:30 ಕ್ಕೆ ಸಮಾವೇಶ ಆರಂಭವಾಗಲಿದೆ.ಟೋಲ್ ಗೇಟ್, ಹೆಬ್ಬಾಳ, ಮೇಖ್ರಿ ಸರ್ಕಲ್ ಬಳಿ ಖರ್ಗೆಗೆ ಅದ್ದೂರಿ ಸ್ವಾಗತ ಸಿಗಲಿದೆ. ಕಾರ್ಯಕ್ರಮದಲ್ಲಿ 50 ಸಾವಿರ ಜನರು ಸೇರಲಿದ್ದು, ರಣದೀಪ್ ಸಿಂಗ್ ಸುರ್ಜೆವಾಲಾ, ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಹಾಜರಿರಲಿದ್ದಾರೆ.

 

ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾವೇಶ ನಡೆಸಲಿದ್ದೇವೆ, . ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಿದ್ದೇವೆ. ನವೆಂಬರ್ 6 ರಂದು ಬೆಳಗ್ಗೆ 10 ಖರ್ಗೆ ಆಗಮಿಸಲಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.

 

ಬೆಂಗಳೂರು ವಿಮಾನ ನಿಲ್ದಾಣದ ಬಳಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತ ಕೋರಲಿದ್ದು, ಮಧ್ಯಾಹ್ನ 2 :30 ಕ್ಕೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ಮಲ್ಲಿಕಾರ್ಜುನ ಖರ್ಗೆ ಇಂದು ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ಹಿನ್ನೆಲೆ. ಪಕ್ಷದ ರಾಜ್ಯ ಘಟಕದ ವತಿಯಿಂದ ಅರಮನೆ ಮೈದಾನದಲ್ಲಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ರಾಜ್ಯ ಕಾಂಗ್ರೆಸ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಸಿದ್ಧತೆ ನಡೆಸಿದ್ದು, ಸಿದ್ದತಾ ಕಾರ್ಯಗಳು ಭರದಿಂದ ಸಾಗುತ್ತಿದೆ.


Spread the love

About Laxminews 24x7

Check Also

ನಿರ್ಮಲಾ ಸೀತಾರಾಮನ್‌ ಭೇಟಿ ಮಾಡಿದ ಸಿಎಂ

Spread the loveನಿರ್ಮಲಾ ಸೀತಾರಾಮನ್‌ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ಅಲ್ಪಾವಧಿ ಕೃಷಿ ಸಾಲದ ಮಿತಿ ಹೆಚ್ಚಿಸುವಂತೆ ಮನವಿಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ