Breaking News

ಬಾಲಕಿ ಜೊತೆ ಅನುಚಿತ ವರ್ತನೆ – ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

Spread the love

ಕಲಬುರಗಿ: ಬಾಲಕಿ ಜೊತೆ ಅನುಚಿತ ವರ್ತನೆ ಕೇಸ್‌ಗೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಕಲಬುರಗಿ ವಿಭಾಗೀಯ ಪೀಠದ  ಮೆಟ್ಟಿಲೇರಿದ್ದಾರೆ.

ಬಾಲಕಿಯ ಜೊತೆ ಮಲ್ಲಿಕಾರ್ಜುನ ಮುತ್ಯಾ ಅಸಭ್ಯವಾಗಿ ನಡೆದುಕೊಂಡಿದ್ದರು. ಹೀಗಾಗಿ ಮುತ್ಯಾನ ವಿರುದ್ಧ ಕ್ರಮ ಜರುಗಿಸಲು ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ದೂರು ದಾಖಲಿಸಿಕೊಂಡಿತ್ತು. ಯಾದಗಿರಿ ಎಸ್ಪಿ ಅವರಿಗೆ ಪತ್ರವನ್ನೂ ಬರೆದಿದ್ದರು. ಅದರಂತೆ ಗೋಗಿ ಪೊಲೀಸ್ ಠಾಣೆಯಲ್ಲಿ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಇದೀಗ ಮಲ್ಲಿಕಾರ್ಜುನ ಮುತ್ಯಾ ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಕಲಬುರಗಿ ವಿಭಾಗೀಯ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಸಲ್ಲಿಸಿದ ಅರ್ಜಿಯಲ್ಲಿ ಪೋಷಕರೇ ದೂರು ನೀಡಿಲ್ಲ. ಆದರೂ ಎಫ್‌ಐಆರ್ ದಾಖಲಿಸಿದ್ದಾರೆ. ಹೀಗಾಗಿ ಎಫ್‌ಐಆರ್ ರದ್ದು ಮಾಡಿ ಎಂದು ಉಲ್ಲೇಖಿಸಿದ್ದಾರೆ. ಈ ಸಂಬಂಧ ಸೋಮವಾರ (ಮಾ.2) ಕೋರ್ಟ್ ವಿಚಾರಣೆ ನಡೆಸಲಿದ್ದಾರೆ.


Spread the love

About Laxminews 24x7

Check Also

ಹಳ್ಳಿಯಲ್ಲಿ ವಾಸಿಸಲು ಇಷ್ಟವಿಲ್ಲವೆಂದು ನವ ವಿವಾಹಿತೆ ಆತ್ಮಹತ್ಯೆ..!

Spread the loveಕಲಬುರಗಿ: ಪ್ರೀತಿಸಿ ಮದುವೆಯಾದ ನವ ವಿವಾಹಿತೆ ಎರಡೇ ತಿಂಗಳಲ್ಲಿ ನೇಣಿಗೆ ಶರಣಾದ ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ