Breaking News

ಎಸ್​ಐಆರ್ ವಿರುದ್ಧ ತಾವೇ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ ಬ್ಯಾನರ್ಜಿ

Spread the love

ನವದೆಹಲಿ, ಫೆಬ್ರವರಿ 04: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ  ಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್​​ನಲ್ಲಿ ಇಂದು ನಡೆಯಲಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖುದ್ದು ವಾದ ಮಂಡಿಸಲು ಕೋರ್ಟ್​​ಗೆ ತೆರಳಿರುವ ವಿಡಿಯೋ ವೈರಲ್ ಆಗಿದೆ. ಬಿಳಿ ಸೀರೆ ಜತೆ ಕಪ್ಪು ದುಪಟ್ಟಾ ಧರಿಸಿ ಅವರು ಕೋರ್ಟ್​ಗೆ ತೆರಳಿದ್ದರು.

ಈ ವಿಷಯವನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಲಿದೆ.ಮಮತಾ ಬ್ಯಾನರ್ಜಿ, ಮೋಸ್ತಾರಿ ಬಾನೋ ಮತ್ತು ತೃಣಮೂಲ ಕಾಂಗ್ರೆಸ್ ಸಂಸದರಾದ ಡೆರೆಕ್ ಒ’ಬ್ರೇನ್ ಮತ್ತು ಡೋಲಾ ಸೇನ್ ಅವರು ಸಲ್ಲಿಸಿರುವ ಅರ್ಜಿಗಳು ಸೇರಿದಂತೆ ಹಲವಾರು ಅರ್ಜಿಗಳನ್ನು ನ್ಯಾಯಪೀಠ ವಿಚಾರಣೆ ನಡೆಸಲಿದೆ.


Spread the love

About Laxminews 24x7

Check Also

ಈಗ 41 ದೇಶಗಳಿಂದ ಇಂಧನ ಅಮದು, ಗಲ್ಫ್‌ನಲ್ಲಿರುವ ಪ್ರತಿಯೊಬ್ಬ ಭಾರತೀಯನ ಸುರಕ್ಷತೆ ನಮಗೆ ಮುಖ್ಯ: ಮೋದಿ

Spread the loveದೆಹಲಿ: ಈಗ ನಾವು 41 ದೇಶಗಳಿಂದ ಇಂಧನವನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ