Breaking News

ಮೇ 8ರಿಂದ ಮಮದಾಪುರ ದುರ್ಗಾದೇವಿ ಜಾತ್ರಾ ಮಹೋತ್ಸವ

Spread the love

ಮಮದಾಪುರ: ಗ್ರಾಮದಲ್ಲಿ ಮೇ 8ರಿಂದ 10ರವರೆಗೆ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವ ಜರುಗಲಿದೆ. ಮೇ 8ರಂದು ಬೆಳಗ್ಗೆ 6ಕ್ಕೆ ದೇವಿಗೆ ಮಹಾ ರುದ್ರಾಭಿಷೇಕ, ಅಲಂಕಾರ ಹಾಗೂ ವಿಶೇಷ ಪೂಜೆ ಸಲ್ಲಿಸಿ ಉಡಿ ತುಂಬಲಾಗುವುದು.

9 ಗಂಟೆಗೆ ಕುಂಭ ಬರಮಾಡಿಕೊಳ್ಳಲಾಗುವುದು. ಸಂಜೆ 6ಕ್ಕೆ ಸುತ್ತಮುತ್ತಲಿನ ಗ್ರಾಮಗಳ ದೇವರ ಪಲ್ಲಕ್ಕಿ ಬರಮಾಡಿಕೊಳ್ಳಲಾಗುವುದು. ಬಳಿಕ ಗ್ರಾಮಸ್ಥರಿಂದ ನೈವೇದ್ಯ ಅರ್ಪಣೆ, ‘ಅಣ್ಣನ ಕಣ್ಣೀರು’ ನಾಟಕ ಪ್ರದರ್ಶನ, ಭಜನಾ ಕಾರ್ಯಕ್ರಮ ನೀಡುವರು.
ಮೇ 9ರಂದು ಪಲ್ಲಕ್ಕಿಯೊಂದಿಗೆ ಅಗ್ನಿ ಹಾಯುವ ಕಾರ್ಯಕ್ರಮ ಜರುಗಲಿದೆ. ಬಳಿಕ ಪಲ್ಲಕ್ಕಿ ಉತ್ಸವ ಹಾಗೂ ರಾತ್ರಿ 10.30ಕ್ಕೆ ‘ಹಳ್ಳಿಯಿಂದ ದಿಲ್ಲಿವರೆಗೆ’ ನಾಟಕ ಪ್ರದರ್ಶನಗೊಳ್ಳಲಿದೆ. ಮೇ 10ರಂದು ಜೋಡೆತ್ತಿನ ಬಂಡಿ ಹಾಗೂ ಜೋಡು ಕುದುರೆ ಸ್ಪರ್ಧೆಗೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ ನೀಡುವರು. ಸಂಜೆ 6ಗಂಟೆಗೆ ಭಂಡಾರ ಒಡೆಯುವ ಮೂಲಕ ಜಾತ್ರೆ ಸಂಪನ್ನಗೊಳ್ಳಲಿದೆ.
ಸ್ಥಳೀಯ ಚರಮೂತೀಶ್ವರ ಸ್ವಾಮೀಜಿ, ಮೌನ ಮಲ್ಲಿಕಾರ್ಜುನ ಶಿವಯೋಗಿಗಳು, ಶಾಂತಾರೂಢ ಸ್ವಾಮೀಜಿ, ಯರನಾಳ ಬ್ರಹ್ಮಾನಂದ ಅಜ್ಜನವರು, ಬಿದರಳ್ಳಿ ಅಜಿತ ಗುರೂಜಿ ಸಾನ್ನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಸಚಿವ ಸತೀಶ ಜಾರಕಿಹೊಳಿ, ಶಾಸಕ ಬಾಲಚಂದ್ರ ಜಾರಕಿಹೊಳಿ,
 ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ, ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅಮರನಾಥ ಜಾರಕಿಹೊಳಿ, ಮುಖಂಡ ಭೀಮನಗೌಡ ಪೊಲೀಸ್‌ಗೌಡರ, ಜಿಪಂ ಮಾಜಿ ಸದಸ್ಯರಾದ ಟಿ.ಆರ್.ಕಾಗಲ್, ಮಡ್ಡೆಪ್ಪ ತೋಳಿನವರ, ಗ್ರಾಪಂ ಮಾಜಿ ಸದಸ್ಯರಾದ ಸುರೇಶ ಸನದಿ, ಕೆಂಪಣ್ಣ ಮೈಲನ್ನವರ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Spread the love

About Laxminews 24x7

Check Also

ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ

Spread the loveಕಲಬುರಗಿ/ಬೀದರ್: ಜೂನ್ 28ರಂದು ಬೀದರ್‌ನ ಬಸವಕಲ್ಯಾಣದಲ್ಲಿ ನಡೆಯಲಿರುವ ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಕರ್ನಾಟಕ ಹೈಕೋರ್ಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ