ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಜಾ ಬಂಧಿಯಾಗಿರುವ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಪೂರೈಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನ ಬಂಧಿಸಲಾಗಿದೆ.
ಬಾಣಸವಾಡಿ ನಿವಾಸಿ ನವೀನ್ ಎಂಬಾತನನ್ನ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.
ಅಪರಾಧ ಪ್ರಕರಣದಲ್ಲಿ ಈ ಹಿಂದೆ ಜೈಲು ಸೇರಿದ್ದ ನವೀನ್ಗೆ ಪ್ರತಾಪ್ ರಾಯ್ ಎಂಬಾತನ ಪರಿಚಯವಾಗಿತ್ತು. ಜೈಲಿನಿಂದ ಹೊರಬಂದ ಬಳಿಕ ನವೀನ್, ಪ್ರತಾಪ್ ರಾಯ್ಗೆ ಅಕ್ರಮವಾಗಿ ಮೊಬೈಲ್ ಫೋನ್ ತಲುಪಿಸಿದ್ದ. ಇದಕ್ಕಾಗಿ ಇಬ್ಬರ ನಡುವೆ ದೊಡ್ಡ ಮಟ್ಟದ ಹಣದ ವ್ಯವಹಾರವೂ ನಡೆದಿತ್ತು ಎಂದು ತಿಳಿಸಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
Laxmi News 24×7