Breaking News

IPL ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡು ಡ್ಯಾಮ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Spread the love

ಕಲಬುರಗಿ: ಐಪಿಎಲ್ ಬೆಟ್ಟಿಂಗ್‌ನಲ್ಲಿ  ಕಳೆದುಕೊಂಡ ವ್ಯಕ್ತಿಯೊಬ್ಬ ನಾಗೂರ ಸೇತುವೆ ಬಳಿ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಕಾಳಗಿ ತಾಲೂಕಿನ ರುಮ್ಮನಗೂಡ್ ನಿವಾಸಿ ಚಂದ್ರಕಾಂತ ದೇಸಾಯಿ (40) ಎಂದು ಗುರುತಿಸಲಾಗಿದೆ. ಈತ ದಿನಾಲೂ ಐಪಿಎಲ್ ಬೆಟ್ಟಿಂಗ್ ಆಡಿ ಹಣ ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಅಲ್ಲದೇ ಹಲವರ ಬಳಿ ಸಾಲ ಮಾಡಿದ್ದ. ಸಾಲಗಾರರ ಕಿರುಕುಳ ತಾಳದೆ ಆತ್ಮಹತ್ಯೆಗೆ ಶರಣಾಗಿದ್ದಾನೆ.

ನಾಗೂರ ಸೇತುವೆ ಬಳಿ ಬೈಕ್ ನಿಲ್ಲಿಸಿ, ಮೊಬೈಲ್ ಇಟ್ಟಿರುವುದು ಪತ್ತೆಯಾಗಿದೆ. ಮಹಾಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಎಲ್‌ಪಿಜಿ ಸಿಲಿಂಡರ್‌ಗೆ ರಾತ್ರಿಯಿಡೀ ಕ್ಯೂ ಕೂತ ಜನ

Spread the loveಬೆಂಗಳೂರು: ಮಧ್ಯಪ್ರಾಚ್ಯ ಯುದ್ಧದಿಂದ ಜಗತ್ತಿನಲ್ಲಿ ʻಎನರ್ಜಿ ಎಮರ್ಜೆನ್ಸಿʼ  ಸೃಷ್ಟಿ ಆಗಿಬಿಡುತ್ತಾ ಅನ್ನೋ ಕಳವಳ ಹೆಚ್ಚಾಗ್ತಿದೆ. ಕೊರೊನಾ ಬಳಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ