ಬಾಗಲಕೋಟೆ: ಜಿಲ್ಲೆಯ ವಿದ್ಯಾಗಿರಿಯಲ್ಲಿ ಹಗಲು ಹೊತ್ತಿನಲ್ಲೇ ಗ್ರಾಹಕನ ಸೋಗಿನಲ್ಲಿ ಬಂದ ಖದೀಮನೊಬ್ಬ ಆಭರಣ ಅಂಗಡಿಯಿಂದ ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ ನಡೆದಿದೆ.
ಬಾಗಲಕೋಟೆ ವಿದ್ಯಾಗಿರಿ ಠಾಣಾ ವ್ಯಾಪ್ತಿಯ ಪ್ರಸಿದ್ಧ ಬೆಂಬಳಗಿ ಜ್ಯುವೆಲ್ಲರ್ಸ್ ಆಭರಣ ಮಳಿಗೆಯಲ್ಲಿ ಈ ಸಿನಿಮಾ ಮಾದರಿಯ ಕಳ್ಳತನ ನಡೆದಿದ್ದು, ಇಡೀ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಜೀನ್ಸ್ ಪ್ಯಾಂಟ್, ಲಾಂಗ್ ಶರ್ಟ್ ಹಾಗೂ ಶೂ ಧರಿಸಿ ಫುಲ್ ಅಪ್‌ಟುಡೇಟ್ ಆಗಿ ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ, ಚಿನ್ನದ ಸರ ಖರೀದಿಸುವ ನೆಪದಲ್ಲಿ ಅಂಗಡಿಗೆ ಪ್ರವೇಶಿಸಿದ್ದಾನೆ. ಅಂಗಡಿಯ ಸಿಬ್ಬಂದಿ ಆತನಿಗೆ ವಿವಿಧ ವಿನ್ಯಾಸದ ಚಿನ್ನದ ಸರಗಳನ್ನು ತೋರಿಸುತ್ತಾ ವಿವರಣೆ ನೀಡುತ್ತಿದ್ದರು. ಈ ವೇಳೆ ಕಳ್ಳನ ಪಕ್ಕದಲ್ಲೇ ನಿಂತಿದ್ದ ದಂಪತಿಯೊಬ್ಬರು ತಮಗಾಗಿ ಬೇರೆ ಆಭರಣಗಳನ್ನು ನೋಡುವುದರಲ್ಲಿ ಮಗ್ನರಾಗಿದ್ದರು.
Laxmi News 24×7