ಬೆಂಗಳೂರು: ವೈದ್ಯನ ವಿರುದ್ಧ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಕೊಡಿಗೆಹಳ್ಳಿಯ ವಿಖ್ಯಾತ್ ಡಯಾಗ್ನೋಸ್ಟಿಕ್ ವೈದ್ಯ ಯುವರಾಜ್ ಮನೋಹರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಇದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೆಲಸದ ವೇಳೆ ಪ್ರಜ್ಞೆ ತಪ್ಪಿಸುವ ಮಾತ್ರೆ ನೀಡಿ ಅತ್ಯಾಚಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದೇ ವೇಳೆ ವಿಡಿಯೋ ಮಾಡಿಕೊಂಡು, ಬ್ಲ್ಯಾಕ್‌ಮೇಲ್ ಮಾಡಿ ಹಲವು ಬಾರಿ ಅತ್ಯಾಚಾರ ಮಾಡಲಾಗಿದೆ ಎಂದು ಯುವತಿ ಆರೋಪಿಸಿದ್ದಾಳೆ.
ಸದ್ಯ ವೈದ್ಯ ಯುವರಾಜ್ ಮನೋಹರ್ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Laxmi News 24×7