Breaking News

ಒಡಹುಟ್ಟಿದ ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಅಣ್ಣನಿಂದ ಕೊಲೆ

Spread the love

ಬೀದರ್: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಅಣ್ಣ-ತಮ್ಮನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ  ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ  ಶಿವಪೂರ ಗ್ರಾಮದಲ್ಲಿ ನಡೆದಿದೆ.

20 ವರ್ಷದ ಸಚಿನ್ ಮೃತ ಯುವಕ. ಸಚಿನ್‌ನ ತಲೆಗೆ ಕಲ್ಲು ಎತ್ತಿಹಾಕಿ ಆತನ ಅಣ್ಣ ನಿತಿನ್ ಹತ್ಯೆ ಮಾಡಿದ್ದಾನೆ.

ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆಯಿಂದಲೇ ಅಣ್ಣ-ತಮ್ಮಂದಿರ ನಡುವೆ ಗಲಾಟೆ ನಡೆಯುತ್ತಿತ್ತು. ತಡರಾತ್ರಿ ಇಬ್ಬರೂ ಕುಡಿದ ಮತ್ತಿನಲ್ಲಿದ್ದಾಗ ಮತ್ತೆ ಜಗಳ ಶುರುವಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ. ನಿತಿನ್ ತಮ್ಮ ಸಚಿನ್‌ ತಲೆಯ ಮೇಲೆ ಕಲ್ಲು ಎತ್ತಿಹಾಕಿದ್ದಾನೆ. ಗಂಭೀರವಾಗಿ ಗಾಯಗೊಂಡ ಸಚಿನ್ ಮೃತಪಟ್ಟಿದ್ದಾನೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಬಸವಕಲ್ಯಾಣ ನಗರ ಠಾಣೆ ಪಿಎಸ್ಐ ಚಂದ್ರಶೇಖರ್ ಹಾಗೂ ಸಿಪಿಐ ಅಲಿಸಾಬ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಬಸವಕಲ್ಯಾಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಸಿಎಂ ಆಗಿದ್ದಾಗಲೇ ನೈಸ್‌ ರದ್ದು ಮಾಡಿದ್ದರೆ ಸಮಸ್ಯೆಯೇ ಇರುತ್ತಿರಲಿಲ್ಲ: ಹೆಚ್‌ಡಿಕೆಗೆ ಕೃಷ್ಣ ಬೈರೇಗೌಡ ತಿರುಗೇಟು

Spread the loveಬೆಂಗಳೂರು: ಹೆಚ್‌ಡಿ ಕುಮಾರಸ್ವಾಮಿ ಅವರೇ ಈ ಹಿಂದೆ ಮುಖ್ಯಮಂತ್ರಿಯಾಗಿದ್ದರು. ಪೆನ್ನು-ಪೇಪರ್ ಕೈಯಲ್ಲಿದ್ದಾಗಲೇ ನೈಸ್‌ ಯೋಜನೆಯನ್ನು  ರದ್ದು ಮಾಡಿದ್ದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ