Breaking News

ಆತ್ಮಹತ್ಯೆಗೆ ಹೇಮಾವತಿ ನದಿಗೆ ಹಾರಿ ಮರಳಿನ ಮೇಲೆ ಬಿದ್ದವನ ರಕ್ಷಣೆ

Spread the love

ಹಾಸನ: ಹೇಮಾವತಿ ನದಿಗೆ  ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಅಗ್ನಿಶಾಮಕದಳ ಹಾಗೂ ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ರಕ್ಷಿಸಿದ ಘಟನೆ ಹಾಸನ  ಜಿಲ್ಲೆ, ಸಕಲೇಶಪುರ  ಪಟ್ಟಣದ, ಮಳಲಿ ಬೈಪಾಸ್‌ನಲ್ಲಿ ನಡೆದಿದೆ.

ಹಾಸನ ಮೂಲದ ಚಿರಂತ್ (38) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಚಿರಂತ್ ರಾಷ್ಟ್ರೀಯ ಹೆದ್ದಾರಿ 75ರ ಬಿಎಂ ರಸ್ತೆಯ ಮಳಲಿ ಬೈಪಾಸ್‌ನಲ್ಲಿರುವ ಹೇಮಾವತಿ ಸೇತುವೆಯಿಂದ ನದಿಗೆ ಜಿಗಿದಿದ್ದಾನೆ. ಚಿರಂತ್ ಜಿಗಿದಿದ್ದನ್ನು ಕಂಡು ಸ್ಥಳೀಯರು ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ನೀರು ಕಡಿಮೆ ಇದ್ದ ಕಾರಣ ಚಿರಂತ್‌ ಮರಳಿನ ಮೇಲೆ ಬಿದ್ದಿದ್ದಾನೆ. ಸದ್ಯ ಅಗ್ನಿಶಾಮಕದಳ ಹಾಗೂ ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಚಿರಂತ್‌ನನ್ನು ರಕ್ಷಿಸಲಾಗಿದೆ. ಆತಹತ್ಯೆಗೆ ಯತ್ನಿಸಲು ನಿಖರ ಕಾರಣ ತಿಳಿದು ಬಂದಿಲ್ಲ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ