Breaking News

ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ: ಸಿಎಂ ಘೋಷಣೆ

Spread the love

ಬೆಳಗಾವಿ: ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮಮಂದಿರದಲ್ಲಿ ನಮಗೆ ಬಹಳ ದೊಡ್ಡ ಅಗೌರವ ಬಂದಿದೆ. ಧರ್ಮದ ಹೆಸರಿನಲ್ಲಿ ಈ ರೀತಿ ಆಗಿದೆ. ಹೀಗಾಗಿ, ಕರ್ನಾಟಕದ ಎಲ್ಲಾ ಮುಜರಾಯಿ ದೇವಸ್ಥಾನದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ದೇವಸ್ಥಾನದಲ್ಲಿ ಅಳವಡಿಸಿದ ಸಿಸಿಟಿವಿ ಕಂಟ್ರೋಲ್ ರೂಮ್ ಸ್ಥಾಪಿಸುತ್ತೇವೆ. ಪ್ರತಿಯೊಂದು ಹಣವನ್ನ ಸಿಸಿಟಿವಿ ಕ್ಯಾಮೆರಾದಲ್ಲಿ ಚಿತ್ರಣ ಆಗಬೇಕು ಎಂದು ಹೇಳಿದರು.

ಎಸ್‌ಐಆರ್ ಬಗ್ಗೆ ಮಾತನಾಡಿ, ಅಧಿಕಾರಿಗಳಿಗೆ ಮಾರ್ಗದರ್ಶನ ಕೊಟ್ಟಿದ್ದೇವೆ. ನಾಲ್ಕೂವರೆ ಕೋಟಿ ಜನರ ದಾಖಲೆಗಳು ಆನ್ಲೈನಲ್ಲಿವೆ. ಪ್ರತಿಯೊಂದು ಬೂತ್‌ನಲ್ಲೂ ಹೆಲ್ಪ್ ಡೆಸ್ಕ್ ಮಾಡ್ತಿದ್ದೇವೆ. ಗ್ಯಾರಂಟಿ ಯೋಜನೆಯಲ್ಲಿ ಹತ್ತು ಜನರ ಹಣ ಒಂದೇ ನಂಬರ್ ಇರೋರಿಗೆ ಹೋಗ್ತಾಯಿತ್ತು. ಲೆಕ್ಕ ಪರಿಶೋಧಕರ ಪರಿಶೀಲನೆ ವೇಳೆ ಪತ್ತೆಯಾಗಿದೆ. ನಮ್ಮ ಶಾಸಕರು ರೈತರ ವಿಮೆಯಲ್ಲಿ ವಂಚನೆ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಬಹಳಷ್ಟು ಜನ ಶಾಸಕರು ಮೊಡಬಿತ್ತನೆಗೆ ಬೇಡಿಕೆ ಇಟ್ಟಿದ್ದಾರೆ. ಮೊನ್ನೆ ಮಾಡಿದ ಮೋಡ ಬಿತ್ತನೆ ಮಾಡಿದ್ರು ಯಶಸ್ವಿ ಆಗಿತ್ತು. ಅದರ ಬಗ್ಗೆ ವರದಿ ತರಿಸಿಕೊಂಡು ಕ್ರಮವಹಿಸುತ್ತೇನೆ ಎಂದರು.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ